ಸಿದ್ದರಾಮಯ್ಯನವರ ಅಲ್ಪ ಸಂಖ್ಯಾತರ ಮೇಲಿನ ಪ್ರೀತಿ ಗೊತ್ತು ಬಿಡಿ: ಬಿವೈ ವಿಜಯೇಂದ್ರ

Krishnaveni K
ಭಾನುವಾರ, 27 ಏಪ್ರಿಲ್ 2025 (14:09 IST)
ಬೆಂಗಳೂರು: ಸಿದ್ದರಾಮಯ್ಯನವರಿಗೆ ಅಲ್ಪಸಂಖ್ಯಾತರ ಬಗ್ಗೆ ಎಷ್ಟು ಪ್ರೀತಿ ಇದೆ ಎಂದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಅಲ್ಪಸಂಖ್ಯಾತರ ವಿಚಾರ ಬಂದಾಗ ಯಾವ ಮಟ್ಟಕ್ಕೂ ಇಳೀತಾರೆ ಎಂಬ ಸತ್ಯ ಜನರಿಗೆ ಗೊತ್ತಿದೆ. ಆದರೆ, ದೇಶದ ವಿಚಾರ ಬಂದಾಗ, ಕಾಶ್ಮೀರದ ಭಯೋತ್ಪಾದಕರ ದಾಳಿ, ಹತ್ಯೆಗಳ ಆ ಘಟನೆಯನ್ನು ಪ್ರತಿಯೊಬ್ಬ ಸ್ವಾಭಿಮಾನಿ ಕೂಡ ಖಂಡಿಸಿದ್ದಾರೆ. ಭಾರತ ಯಾವತ್ತೂ ಯುದ್ಧ ಸಾರಿದ ಇತಿಹಾಸ ಇಲ್ಲ; ಆದರೆ, ಇವತ್ತು ಭಾರತೀಯರ ರಕ್ಷಣೆ ಮಾಡಬೇಕಾದ ಸಂದರ್ಭದಲ್ಲಿ ಏನು ತೀರ್ಮಾನ ಮಾಡಬೇಕೋ ಅದನ್ನು ಪ್ರಧಾನಿಯವರು ಎಲ್ಲ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸುತ್ತಾರೆ ಎಂದರು.

ಇದರ ನಡುವೆ, ಸನ್ಮಾನ್ಯ ಸಿದ್ದರಾಮಯ್ಯನವರು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬಾರದು ಎಂಬ ದೃಷ್ಟಿಕೋನ ಖಂಡಿತ ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು. 

ಯಡಿಯೂರಪ್ಪ ಅವರ ಮಾತಿನಂತೆ ಸಿದ್ದರಾಮಯ್ಯನವರು ಈ ದೇಶದ ಜನರ ಕ್ಷಮೆ ಕೂಡ ಕೇಳಬೇಕು ಎಂದು ಆಗ್ರಹಿಸಿದರು. ಸಿದ್ದರಾಮಯ್ಯನವರಿಂದ ಈ ರೀತಿಯ ಹೇಳಿಕೆಯನ್ನು ಯಾರೂ ನಿರೀಕ್ಷಿಸಿರಲಿಲ್ಲ ಎಂದು ನುಡಿದರು.

ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಜಾತಿ ಗಣತಿಗೆ ಸಂಬಂಧಿಸಿ ಸಿದ್ದರಾಮಯ್ಯನವರು ಹಲವಾರು ಸುತ್ತಿನ ಸಭೆಗಳನ್ನು ಮಾಡಿದ್ದಾರೆ. ಮುಖ್ಯಮಂತ್ರಿಗಳು ಮೊನ್ನೆ ಕ್ಯಾಬಿನೆಟ್‍ನ ವಿಶೇóಷ ಸಭೆ ಕರೆದಿದ್ದರು. ಕ್ಯಾಬಿನೆಟ್ ತೀರ್ಮಾನ ಕುರಿತು ನಿರ್ಣಯವೂ ಸಿದ್ಧವಿತ್ತು. ಆದರೂ ಕೂಡ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಇದಕ್ಕೆ ಮುಖ್ಯಮಂತ್ರಿಗಳು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಮಾಜಿ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ಸಿನ ಹಿರಿಯ ನೇತಾರ ವೀರಪ್ಪ ಮೊಯಿಲಿಯವರೇ ಜಾತಿ ಜನಗಣತಿ 10 ವರ್ಷದಷ್ಟು ಹಳೆಯದು; ವೈಜ್ಞಾನಿಕವಾಗಿಲ್ಲ ಎಂದು ಹೇಳಿದ ಕುರಿತು ಗಮನಕ್ಕೆ ತಂದರು. ಈಡಿಗ, ಮಡಿವಾಳ ಸೇರಿ ಅನೇಕ ಹಿಂದುಳಿದ ಸಮುದಾಯಗಳು ಇದನ್ನು ಪ್ರಶ್ನೆ ಮಾಡುತ್ತಿದ್ದಾರೆ ಎಂದು ವಿವರಿಸಿದರು. ಅಂಕಿಅಂಶಗಳ ಕುರಿತು ಆಕ್ಷೇಪಿಸಿದ್ದಾರೆ ಎಂದು ತಿಳಿಸಿದರು. ಸಿದ್ದರಾಮಯ್ಯನವರು ಯಾಕೆ ಇಷ್ಟು ಆತುರ ಮಾಡುತ್ತಿದ್ದಾರೆ ಎಂಬ ಪ್ರಶ್ನೆಯನ್ನು ಮುಂದಿಟ್ಟರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments