Webdunia - Bharat's app for daily news and videos

Install App

ರೈತರು ಮಧ್ಯರಾತ್ರಿವರೆಗೆ ಹೊಲದಲ್ಲಿ ಕೂತರೂ ಕರೆಂಟ್ ಬರಲ್ಲ: ವಿಜಯೇಂದ್ರ

Krishnaveni K
ಶುಕ್ರವಾರ, 21 ಫೆಬ್ರವರಿ 2025 (15:25 IST)
ಬೆಂಗಳೂರು: ರಾಜ್ಯ ಸರಕಾರ ಎಚ್ಚತ್ತುಕೊಳ್ಳಬೇಕಿದೆ. ಗ್ಯಾರಂಟಿಗಳ ಭ್ರಮೆಯಿಂದ ಹೊರಬಂದು ವಿದ್ಯುತ್ ಸಮಸ್ಯೆಯಿಂದ ಬಳಲುತ್ತಿರುವ ನಾಡಿನ ರೈತರ ಸಂಕಷ್ಟವನ್ನು ನಿವಾರಿಸಬೇಕು. ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಮರ್ಪಕವಾಗಿ ಆರೇಳು ತಾಸು ವಿದ್ಯುತ್ ಕೊಡಲು ರಾಜ್ಯ ಸರಕಾರದಿಂದ ಆಗುತ್ತಿಲ್ಲ; ರೈತರಿಗೆ ಯಾವಾಗ ಕರೆಂಟ್ ಬರುತ್ತದೆ; ಯಾವಾಗ ಇರುವುದಿಲ್ಲ ಎಂದು ತಿಳಿಯದಂತಾಗಿದೆ. ಇಲಾಖೆಯವರು ರಾತ್ರಿ 10 ಗಂಟೆಯಿಂದ ವಿದ್ಯುತ್ ಕೊಡುವುದಾಗಿ ಹೇಳುತ್ತಾರೆ. ರೈತರು ಹೊಲದಲ್ಲಿ ಕಾದರೂ 12 ಗಂಟೆವರೆಗೂ ವಿದ್ಯುತ್ ಬರುವುದಿಲ್ಲ ಎಂದು ಆಕ್ಷೇಪಿಸಿದರು.
 
ಸರಕಾರವು ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಟೀಕಿಸಿದ ಅವರು, ವಿದ್ಯುತ್ ಅಭಾವ ಇದ್ದರೆ ಹೊರರಾಜ್ಯಗಳಿಂದ ಖರೀದಿ ಮಾಡಬೇಕೇ ಎಂಬುದರ ಕಡೆ ತಯಾರಿಯನ್ನು ರಾಜ್ಯ ಸರಕಾರ ಮಾಡಬೇಕಿದೆ. ವಿದ್ಯುತ್ ಅವ್ಯವಸ್ಥೆಯಿಂದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಬಾರದು. ರೈತರ ಸಂಕಷ್ಟ ಪರಿಹರಿಸಿ ಎಂದು ಆಗ್ರಹಿಸಿದರು.
 
ನಗರದ ಗುಂಡಿ ಮುಚ್ಚಲಾಗದ ಸರಕಾರ
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರಿನ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಒಂದು ಹೇಳಿಕೆ ನೀಡಿದ್ದಾರೆ. ಇನ್ನೂ ಎರಡು ಮೂರು ವರ್ಷಗಳು ಕಳೆದರೂ ಸಹ, ಭಗವಂತನೇ ಭೂಮಿಗೆ ಅವತರಿಸಿ ಬಂದರೂ ಈ ಬೆಂಗಳೂರನ್ನು ಉದ್ಧಾರ ಮಾಡಲು ಆಗುವುದಿಲ್ಲ ಎಂದಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದವರು; ಬೆಂಗಳೂರನ್ನು ಸಿಂಗಾಪುರ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದವರು. ಅಂಥ ಸಚಿವರ ಬಾಯಲ್ಲಿ ಬಂದ ಮಾತು ಇದು ಎಂದು ಟೀಕಿಸಿದರು.
 
ಕಾಂಗ್ರೆಸ್ ಸರಕಾರದ ಯೋಗ್ಯತೆಗೆ ಬೆಂಗಳೂರು ಮಹಾನಗರದಲ್ಲಿ ಗುಂಡಿ ಮುಚ್ಚಲು ಸಾಧ್ಯ ಆಗುತ್ತಿಲ್ಲ; ಬೆಂಗಳೂರಿನಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಶಾಸಕರಿಗೆ ಹಣ ಕೊಡುತ್ತಿಲ್ಲ. ಇವರು ಅಭಿವೃದ್ಧಿ ಬಗ್ಗೆ ಮಾತನಾಡುವುದು ದುರಂತ ಎಂದು ತಿಳಿಸಿದರು. ಭಾರತವನ್ನು ಬೆಂಗಳೂರಿನ ಮುಖೇನ ನೋಡುತ್ತಾರೆ ಎಂದು ವಿವರಿಸಿದರು. ಡಿ.ಕೆ.ಶಿವಕುಮಾರ್ ಅವರ ಇಂಥ ಹೇಳಿಕೆ ಸಹಜವಾಗಿ ಸಾಕಷ್ಟು ಜನರಿಗೆ ಬೇಸರ ತಂದಿದೆ ಎಂದು ವಿಶ್ಲೇಷಿಸಿದರು.
 
9 ವಿವಿ ಮುಚ್ಚುವ ತೀರ್ಮಾನ ಅವೈಜ್ಞಾನಿಕ
ಇವತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ದುಂಡುಮೇಜಿನ ಸಭೆಯನ್ನು ಆಯೋಜಿಸಿದೆ. ಶಿಕ್ಷಣ ತಜ್ಞರು, ಅನೇಕ ಹಿರಿಯರು, ಜನಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಮುಂದಿನ 5 ವರ್ಷಗಳಲ್ಲಿ 350 ಕೋಟಿ ಹಣಕಾಸು ಕೊಡಲು ಸಾಧ್ಯವಿಲ್ಲದ ಕಾರಣ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವಂತೆ ರಾಜ್ಯ ಸರಕಾರದ ಕ್ಯಾಬಿನೆಟ್ ಉಪ ಸಮಿತಿ ಕೊಟ್ಟ ವರದಿ, ವಿವಿಗಳನ್ನು ಮುಚ್ಚುವ ಸರಕಾರದ ತೀರ್ಮಾನ ಅವೈಜ್ಞಾನಿಕ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದು ಅವಿವೇಕತನದ ನಿರ್ಧಾರ ಎಂದರು.

ಇದರ ವಿರುದ್ಧ ರಾಜಕೀಯೇತರ ನೆಲೆಯಿಂದ ಹೋರಾಟ ಮಾಡಬೇಕಿದೆ. ವಿದ್ಯಾರ್ಥಿ ಪರಿಷತ್ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಬಿಜೆಪಿಯ ನಾವು ಕೂಡ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ಕೊಡಲಿದ್ದೇವೆ. ಗ್ರಾಮೀಣ ಭಾಗದಲ್ಲಿ ಬಡವರ ಭವಿಷ್ಯ ರೂಪಿಸುವ ವಿಶ್ವವಿದ್ಯಾಲಯಗಳನ್ನು ಮುಚ್ಚುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು. ದೊಡ್ಡ ಮಟ್ಟದ ಹೋರಾಟ ಮಾಡಲಿದ್ದೇವೆ ಎಂದು ಪ್ರಕಟಿಸಿದರು.

ಒಂದು ಜಿಲ್ಲೆ ಒಂದು ವಿವಿ ಪರಿಕಲ್ಪನೆಯಡಿ ಈ ವಿವಿಗಳನ್ನು ರಚಿಸಲಾಗಿದೆ. ಹಣಕಾಸಿನ ಬಿಕ್ಕಟ್ಟನ್ನೇ ಆಧಾರವಾಗಿ ಇಟ್ಟುಕೊಂಡು ರಾಜ್ಯ ಸರಕಾರ ಅವಿವೇಕತನದ ನಿರ್ಧಾರ ತೆಗೆದುಕೊಳ್ಳಬಾರದು. ಆ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.
 
 
                                                       
 
   
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

Pope Francis Passes away: ಕ್ಯಾಥೋಲಿಕ್ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

Rahul Gandhi: ಚುನಾವಣೆ ಆಯೋಗವೇ ಅಕ್ರಮ ಮಾಡ್ತಿದೆ: ಅಮೆರಿಕಾದಲ್ಲಿ ಕಿಡಿ ಕಾರಿದ ರಾಹುಲ್ ಗಾಂಧಿ, ದೇಶದ್ರೋಹಿ ಎಂದ ಬಿಜೆಪಿ

ಮುಂದಿನ ಸುದ್ದಿ
Show comments