ಸಂಬಳವಿಲ್ಲದೇ ಗ್ರಂಥಪಾಲಕಿ ಆತ್ಮಹತ್ಯೆ: ಪ್ರಿಯಾಂಕ್ ಖರ್ಗೆಗೆ ಇದೆಲ್ಲಾ ಕಾಣಲ್ಲ ಎಂದ ವಿಜಯೇಂದ್ರ

Krishnaveni K
ಮಂಗಳವಾರ, 14 ಅಕ್ಟೋಬರ್ 2025 (11:36 IST)
ಬೆಂಗಳೂರು: ಕಲಬುರಗಿಯ ಸೇಡಂ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕಿ ಸಂಬಳವಿಲ್ಲದೇ ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದು ಪ್ರಿಯಾಂಕ್ ಖರ್ಗೆಗೆ ಇದೆಲ್ಲಾ ಕಾಣಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಸಂಬಳ ಸಿಗದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಗ್ರಂಥಾಲಯ ಮೇಲ್ವಿಚಾರಕಿ ಅರಿವು ಕೇಂದ್ರದಲ್ಲೇ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಆಕೆಗೆ ಕೇವಲ 40 ವರ್ಷ ವಯಸ್ಸಾಗಿತ್ತು. ಘಟನೆ ಬಗ್ಗೆ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ವೇತನವಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರ ಸಾವು ಕಾಂಗ್ರೆಸ್ ಸರ್ಕಾರದ ದಿವಾಳಿತನ ಹಾಗೂ ಹೃದಯ ಹೀನ ವ್ಯವಸ್ಥೆಯನ್ನು ಅನಾವರಣಗೊಳಿಸಿದೆ. ಭಾಗ್ಯವತಿ ಅಗ್ಗಿಮಠ ಅವರ ದುರಂತ ಅಂತ್ಯ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.

ರಾಜ್ಯದ ನಿರ್ದಯಿ ಸರ್ಕಾರ ತನ್ನ ನೌಕರರಿಗೆ ಸಂಬಳ ಕೊಡದ ಸ್ಥಿತಿಗೆ ತಲುಪಿ ಸಂಬಳವನ್ನೇ ನೆಚ್ಚಿಕೊಂಡು ಬದುಕು ನಡೆಸುವ ನೌಕರರ ಪಾಲಿಗೆ ಕಂಟಕಪ್ರಾಯವಾಗಿದೆ. ಸರ್ಕಾರದ ಈ ನಡೆ ಅತ್ಯಂತ ಖಂಡನೀಯ. ಮೃತ ಭಾಗ್ಯವತಿ ಅಗ್ಗಿಮಠ ಅವರ ಕುಟುಂಬ ಅತ್ಯಂತ ಸಂಕಷ್ಟದಲ್ಲಿದ್ದು ಈ ಕೂಡಲೇ ಸೂಕ್ತ ಪರಿಹಾರ ಹಾಗೂ ಒಬ್ಬರಿಗೆ ನೌಕರಿ ನೀಡುವ ಮೂಲಕ ಮೃತರ ಅವಲಂಬಿತ ಮಕ್ಕಳ ನೆರವಿಗೆ ಬಂದು ಸರ್ಕಾರ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ.

ಮುಖ್ಯಮಂತ್ರಿಗಳಿಂದ ಹಿಡಿದು ಇತರ ಮಂತ್ರಿಗಳು ಹಾಗೂ ಅಧಿಕಾರಿಗಳು ಜನರ, ರೈತರ, ಸಮಸ್ಯೆಗಳಿಗೆ ಸ್ಪಂದಿಸದೆ, ವಿಮುಖರಾಗಿ ಅಧಿಕಾರ ರಾಜಕಾರಣದತ್ತ ತಮ್ಮ ಸಂಪೂರ್ಣ ಸಮಯವನ್ನು ಕೇಂದ್ರೀಕರಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಜಿಲ್ಲೆಯ ಸ್ಥಿತಿ ಏನಾಗಿದೆ ಎಂದು ತಿಳಿದುಕೊಳ್ಳುವ ವ್ಯವಧಾನ ತೋರುತ್ತಿಲ್ಲ , ಬಡವರ ಗೋಳು ಆಲಿಸುತ್ತಿಲ್ಲ.

ನಿರ್ಲಕ್ಷ್ಯ, ಉಡಾಫೆ ಧೋರಣೆ ‘ಕೈ’ಸರ್ಕಾರದ ಆಡಳಿತ ವೈಖರಿ ಎನ್ನುವುದಕ್ಕೆ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸಾಕ್ಷಿ ಒದಗಿಸಿದೆ’ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments