ಜನರ ಕಷ್ಟಕ್ಕೆ ದುಡ್ಡಿಲ್ಲ, ಸರ್ಕಾರಕ್ಕೆ ಹೆಲಿಕಾಪ್ಟರ್ ಚಿಂತೆ: ಬಿವೈ ವಿಜಯೇಂದ್ರ

Krishnaveni K
ಮಂಗಳವಾರ, 2 ಸೆಪ್ಟಂಬರ್ 2025 (17:00 IST)

ಬೆಂಗಳೂರು: ಜನರ ಕಷ್ಟಕ್ಕೆ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಆದರೆ ಸರ್ಕಾರಕ್ಕೆ ಹೆಲಿಕಾಪ್ಟರ್ ಖರೀದಿಸುವ ಚಿಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಇನ್ನು ಮುಂದೆ ಅಧಿಕೃತ ಕೆಲಸಗಳಿಗೆ ವಿಶೇಷ ವಿಮಾನ ಮತ್ತು ಹೆಲಿಕಾಪ್ಟರ್ ವಾರ್ಷಿಕ ಗುತ್ತಿಗೆ ಪಡೆಯಲು ಮುಂದಾಗಿದೆ. ಇದನ್ನು ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.

'ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ, ಹೊಸ ಹೊಸ ಯೋಜನೆ ರೂಪಿಸಲು ಹಣವಿಲ್ಲ, ಸಮಯಕ್ಕೆ ಸರಿಯಾಗಿ ಸರ್ಕಾರಿ ನೌಕರರ ಸಂಬಳಕೊಡಲಾಗುತ್ತಿಲ್ಲ, ಆಪತ್ಕಾಲದಲ್ಲಿ ಜೀವನ್ಮರಣದೊಂದಿಗೆ ಹೋರಾಡುವ ರೋಗಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಹಣವೂ ಸಕಾಲದಲ್ಲಿ ತಲುಪುತ್ತಿಲ್ಲ, ಕನಿಷ್ಠ ಸ್ವಾತಂತ್ರ್ಯ ಯೋಧರ ಪಿಂಚಣಿಯನ್ನೂ ಕೊಡಲಾಗುತ್ತಿಲ್ಲ, ಇಂತಹ ದಯನಿಯ ಆರ್ಥಿಕ ಸ್ಥಿತಿಯಲ್ಲಿರುವ ಕಾಂಗ್ರೆಸ್ ಸರ್ಕಾರ '5 ಸೀಟರ್ ನ ಹೆಲಿಕಾಪ್ಟರ್ ಹಾಗೂ 13 ಸೀಟರ್ ಜೆಟ್' ಖರೀದಿಸಲು ಹೊರಟಿರುವುದು ಅತ್ಯಂತ ವಿಪರ್ಯಾಸ. ಇದು "ಹೊಟ್ಟೆಗೆ ಇಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು" ಎಂಬ ಗಾದೆ ನೆನಪಿಸುವಂತಿದೆ.

 

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೋಜಿನ ಕಾರ್ಯಕ್ರಮಗಳು, ಸ್ವಪ್ರತಿಷ್ಠೆ ಮೆರೆಯಲು ಸಮಾವೇಶಗಳನ್ನು ಆಯೋಜಿಸಿ ಪ್ರತಿಷ್ಠೆ ಮೆರೆಯಲು ಸರ್ಕಾರದ ಖಜಾನೆ ಖಾಲಿ ಮಾಡಿದೆ. ಜನರ ತೆರಿಗೆ ಹಣದಲ್ಲಿ ದುಂದು ವೆಚ್ಚ ಮಾಡಲು ತೆರಿಗೆ ಹಾಗೂ ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಸುತ್ತಲೇ ಇದೆ. ಜನ ಅಧಿಕಾರ ಕೊಡುವುದು ಜನಸೇವೆಗಾಗಿ ಎಂಬ ಸಿದ್ಧಾಂತದ ನೆನಪು ಕಾಂಗ್ರೆಸ್ಸಿಗರಿಗೆ ಎಂದೂ ಬರುವುದಿಲ್ಲ.

 

ರಾಜ್ಯ ಹಾಗೂ ಜನತೆಯ ಮುಂದೆ ಸಾಲು, ಸಾಲು ಸವಾಲುಗಳಿವೆ, ಜನರ ಸಂಕಷ್ಟ ವಿಪರೀತಕ್ಕೆ ಹೋಗುತ್ತಿದೆ, ಮೊದಲು ಜನರ ದುಃಖ-ದುಮ್ಮಾನಗಳಿಗೆ ಸ್ಪಂದಿಸಲಿ, ತುರ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಿ, ಸದ್ಯ ವೆಚ್ಚ ಉಳಿಸುವ ನೆಪದಲ್ಲಿ ಹೆಲಿಕಾಪ್ಟರ್ ಹಾಗೂ ವಿಮಾನಗಳನ್ನು ಖರೀದಿಸುವ ಪ್ರಕ್ರಿಯೆಯಿಂದ ಹಿಂದೆ ಸರಿಯಲಿ’ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments