Webdunia - Bharat's app for daily news and videos

Install App

ಗ್ಯಾರಂಟಿ ಬಗ್ಗೆ ವಿಶ್ವಾಸವಿದ್ದರೆ 15 ದಿನ ಬಾಗಲಕೋಟೆಯಲ್ಲಿ ಸಿಎಂ ವಾಸ್ತವ್ಯ ಇದ್ದರೇಕೆ: ವಿಜಯೇಂದ್ರ

ಕೃಷ್ಣವೇಣಿ ಕೆ
ಬುಧವಾರ, 6 ಮೇ 2026 (14:30 IST)
ಚಿತ್ರದುರ್ಗ: ಮುಖ್ಯಮಂತ್ರಿಗಳು ಗ್ಯಾರಂಟಿಗಳಿಂದ ಬೀಗುತ್ತಿದ್ದಾರೆ. ನಿಮ್ಮ ಗ್ಯಾರಂಟಿಗಳ ಬಗ್ಗೆ ಅಷ್ಟೊಂದು ವಿಶ್ವಾಸ ಇದ್ದರೆ ಸಿಎಂ ಅವರು ಯಾಕೆ 15 ದಿನಗಳ ಕಾಲ ಬಾಗಲಕೋಟೆಗೆ ಬಂದು ಕೂರಬೇಕಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ.

ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಪ ಚುನಾವಣೆಯ ಸೋಲಿನಿಂದ ಹತಾಶರಾಗುವ ಪ್ರಶ್ನೆ ಉದ್ಭವಿಸುವುದಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರಂಥ ದಿಟ್ಟ ನಾಯಕತ್ವ ದೇಶಕ್ಕೆ ಸಿಕ್ಕಿದೆ. ನಿತಿನ್ ನಬೀನ್ ಜೀ ಅವರು ಒಬ್ಬ ಯುವ ರಾಷ್ಟ್ರೀಯ ಅಧ್ಯಕ್ಷರು ನೇತೃತ್ವ ವಹಿಸಿಕೊಂಡಿದ್ದಾರೆ. ಅಮಿತ್ ಶಾ ಜೀ ಅವರಂಥ ಚುನಾವಣಾ ಚಾಣಕ್ಯ ನಮ್ಮ ಜೊತೆಗಿದ್ದಾರೆ. ಉಪ ಚುನಾವಣೆ ಸೋಲಿನ ಸಂಬಂಧ ತಲೆಕೆಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಪ್ರಶ್ನೆಗೆ ಉತ್ತರ ನೀಡಿದರು.
ಗೃಹಲಕ್ಷ್ಮಿ ಯೋಜನೆ ಇವತ್ತು ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಇವರು ಬಡವರಿಗೆ ಯೋಜನೆಗಳನ್ನು ನೀಡಲಿ. ಇವರೊಬ್ಬರೇ ಯೋಜನೆಗಳನ್ನು ನೀಡಿಲ್ಲ. ಯಡಿಯೂರಪ್ಪನವರು ಹಿಂದೆ ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಬೈಸಿಕಲ್ ಯೋಜನೆಗಳನ್ನು ನೀಡಿದ್ದರು. ಇನ್ನೂ ಹಲವು ಒಳ್ಳೆಯ ಯೋಜನೆ ಕೊಟ್ಟಿದ್ದಾರೆ. ಆದರೆ, ಗೃಹಲಕ್ಷ್ಮಿ ಇವತ್ತು ಚುನಾವಣಾ ಲಕ್ಷ್ಮಿಯಾಗಿರುವುದು ಖಂಡಿತ ಸರಿಯಲ್ಲ ಎಂದು ಆಕ್ಷೇಪಿಸಿದರು.

ಪ್ರತಿ ತಿಂಗಳ ಬದಲು ಅದನ್ನು ತಡೆಹಿಡಿದು ಉಪ ಚುನಾವಣೆಯಲ್ಲಿ ಮೊನ್ನೆ ಬಿಡುಗಡೆ ಮಾಡಿದ್ದಾರೆ. ಇನ್ನು ಮುಂದಿನ ಕಂತನ್ನು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಬಂದಾಗಲೇ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು. ಇವರು ಜನರಿಗೆ ಆಮಿಷವೊಡ್ಡುವ ರೀತಿಯಲ್ಲಿ ಯೋಜನೆ ನೀಡುತ್ತಿದ್ದಾರೆ. ಯಡಿಯೂರಪ್ಪನವರು ಮುಖ್ಯಮಂತ್ರಿ ಇದ್ದಾಗ ದೂರದೃಷ್ಟಿಯಿಂದ ಭಾಗ್ಯಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ತಂದಿದ್ದರು. ಈ ಉಪ ಚುನಾವಣೆ ಸೋಲಿನಿಂದ ಬಿಜೆಪಿ, ಬಿಜೆಪಿ ಕಾರ್ಯಕರ್ತರು ಹೆದರಿಕೊಳ್ಳುವ ಪ್ರಶ್ನೆಯೇ ಇಲ್ಲ. ಇವೆಲ್ಲವನ್ನೂ ಮೀರಿ ಸಂಘಟನೆ ಬಲಪಡಿಸುತ್ತೇವೆ. ಹಿರಿಯರ ಆಶೀರ್ವಾದದಿಂದ ರಾಜ್ಯದಲ್ಲಿ ಮತ್ತೆ ಸರಕಾರ ತರುತ್ತೇವೆ ಎಂದು ವಿಶ್ವಾಸದಿಂದ ನುಡಿದರು.
 
ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿಯವರು ಪ್ರವಾಸ ಮಾಡಿದ್ದರು. ರಾಜ್ಯ ಹೈಕೋರ್ಟಿನ ಆದೇಶದಂತೆ ಶೃಂಗೇರಿಯಲ್ಲಿ ಮರು ಮತ ಎಣಿಕೆ ನಡೆದು ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಗೆದ್ದಿದ್ದಾರೆ. ರಾಹುಲ್ ಗಾಂಧಿಯವರು ಈಗ ದೇಶದ ಜನರ ಕ್ಷಮೆ ಕೇಳಬೇಕು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
 
ಮಾನ ಮರ್ಯಾದೆ ಇದ್ದರೆ ಸಭಾಧ್ಯಕ್ಷರು ಅವರಿಗೆ ತಕ್ಷಣ ಪ್ರಮಾಣವಚನ ಬೋಧಿಸಬಹುದು. ಆದರೆ, ಸಭಾಧ್ಯಕ್ಷರು ತಮ್ಮ ಸಾಂವಿಧಾನಿಕ ಸ್ಥಾನಕ್ಕೆ ಅಪಚಾರ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಅವರು ರಾಜಕಾರಣ ಮೀರಿ ನಡೆದುಕೊಳ್ಳಲಿ ಎಂದು ಒತ್ತಾಯಿಸಿದರು. ಕಾಂಗ್ರೆಸ್ಸಿನವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ದೂರಿದರು. ಸ್ಪೀಕರ್ ಅವರು ರಾಜಕಾರಣ, ರಾಜಕಾರಣಿಗಳ ಒತ್ತಡಕ್ಕೆ ಮಣಿಯದೇ ನ್ಯಾಯಯುತವಾಗಿ ನಡೆದುಕೊಳ್ಳಲಿ. ಕೂಡಲೇ ಜೀವರಾಜ್ ಅವರಿಗೆ ಪ್ರಮಾಣವಚನ ಬೋಧಿಸಲಿ ಎಂದು ಮನವಿ ಮಾಡಿದರು. ಪರಾಜಿತ ಅಭ್ಯರ್ಥಿ ರಾಜೇಗೌಡರು ಹೈಕೋರ್ಟಿಗೆ ಹೋಗಲು ಸಮಯಾವಕಾಶ ಕೊಡಲು ಕಟ್ಟುಕಥೆ ಹೇಳುತ್ತಿದ್ದಾರೆ ಎಂದು ಆಕ್ಷೇಪಿಸಿದರು.
 
ಬಾಬಾಸಾಬೇಬ ಅಂಬೇಡ್ಕರ್, ಸಂವಿಧಾನದ ಬಗ್ಗೆ ಕಾಂಗ್ರೆಸ್ಸಿನವರು ಬಹಳ ಮುದ್ದುಮುದ್ದಾಗಿ ಮಾತನಾಡುತ್ತಾರೆ. ಆದರೆ, ಡಾ. ಬಾಬಾಸಾಬೇಬ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಅಪಚಾರ ಮಾಡುವ ಕೆಲಸವನ್ನು ಕಾಂಗ್ರೆಸ್ಸಿನವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments