Publish Date: Sat, 22 Nov 2025 (14:15 IST)
Updated Date: Sat, 22 Nov 2025 (14:17 IST)
ನವದೆಹಲಿ: ಒಂದೆಡೆ ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡೆಯುತ್ತಿದ್ದರೆ ಇತ್ತ ಬಿಜೆಪಿಯಲ್ಲೂ ಚಟುವಟಿಕೆ ಗರಿಗೆದರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇಂದು ದೆಹಲಿಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿದ್ದಾರೆ.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ಬಣದ ನಡುವೆ ಕುರ್ಚಿ ಫೈಟ್ ನಡೆಯುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಬೀಡು ಬಿಟ್ಟಿದೆ. ಸಂಪುಟ ವಿಸ್ತರಣೆ ಜೊತೆಗೆ ಸಿಎಂ ಬದಲಾವಣೆ ಯಾವ ಹಂತಕ್ಕೆ ತಲುಪಲಿದೆ ಎಂದು ಜನರು ಕುತೂಹಲದಿಂದ ನೋಡುತ್ತಿದ್ದಾರೆ.
ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪಕ್ಷ ಸಂಘಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟದ ರೂಪುರೇಷೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ, ಸಲಹೆಗಳನ್ನು ಪಡೆದರು.
ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬಣ ರಾಜಕೀಯದ ಲಾಭ ಪಡೆಯಲು ಬಿಜೆಪಿ ಮುಂದಾಗುವ ಸಾಧ್ಯತೆಯಿದೆ. ಇದನ್ನು ಬಿಜೆಪಿ ಹೇಗೆ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತದೆ ಎನ್ನುವುದು ಸದ್ಯದ ಕುತೂಹಲವಾಗಿದೆ.