Publish Date: Fri, 26 Jun 2026 (10:24 IST)
Updated Date: Fri, 26 Jun 2026 (10:28 IST)
ಮಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಪತ್ತೆಗೆ ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮಾಡುವುದಾಗಿ ಹೇಳಿ ವಿವಾದವಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಶಾಸಕರು ಅಡ್ಡಮತದಾನ ಮಾಡಿದ್ದು ಹೈಕಮಾಂಡ್ ಕೆಂಗಣ್ಣಿಗೂ ಗುರಿಯಾಗಿತ್ತು. ಇದರ ಬೆನ್ನಲ್ಲೇ ವಿಜಯೇಂದ್ರ ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಪ್ರಮಾಣ ಮಾಡಿಸುವುದಾಗಿ ಹೇಳಿದ್ದರು. ಆದರೆ ರಾಜಕೀಯ ಕಾರಣಕ್ಕೆ ಧರ್ಮಸ್ಥಳ ಪುಣ್ಯ ಕ್ಷೇತ್ರವನ್ನು ಎಳೆದು ತರುವುದು ಬೇಡ ಎಂದು ಸ್ವಪಕ್ಷೀಯರೇ ಅಸಮಾಧಾನ ಹೊರಹಾಕಿದ ಮೇಲೆ ಈ ನಿರ್ಧಾರದಿಂದ ಹಿಂದೆ ಸರಿದಿದ್ದರು.
ಆದರೆ ಇಂದು ತಾವೇ ಖುದ್ದಾಗಿ ಧರ್ಮಸ್ಥಳಕ್ಕೆ ಭೇಟಿಯಾಗಿ ಪೂಜೆ ಮಾಡಿಸಿದ್ದಾರೆ. ಜೊತೆಗೆ ಕ್ಷೇತ್ರ ದರ್ಶನ, ಪೂಜೆ ಬಳಿಕ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸುಳ್ಯ ಶಾಸಕಿ ಭಾಗೀರತಿ ಮುರುಳ್ಯ ಹಾಗೂ ಸ್ಥಳೀಯ ಬಿಜೆಪಿ ನಾಯಕರು ಸಾಥ್ ನೀಡಿದ್ದರು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ