Daily Horoscope

Select Your Language

Notifications

webdunia
webdunia
webdunia
webdunia

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

Vijayendra-Ravishankar Guruji
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ಆರ್ಟ್ ಆಫ್ ಲಿವಿಂಗ್ ಗೆ ಭೇಟಿ ನೀಡಿದರು.

ಆರ್ಟ್ ಆಫ್ ಲಿವಿಂಗ್ ಅನ್ನು 1981ರಲ್ಲಿ ಗುರುದೇವ್ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಸ್ಥಾಪಿಸಿದ್ದು, ಇದೊಂದು  ಜಾಗತಿಕ, ಲಾಭರಹಿತ ಮತ್ತು ಮಾನವತಾವಾದಿ ಸಂಸ್ಥೆಯಾಗಿದೆ. ಶ್ರೀ ಶ್ರೀ ರವಿಶಂಕರ್ ಅವರು 70ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅವರಿಗೆ ಶುಭ ಹಾರೈಸಿದರು.

ಶಾಸಕ ಎಂ.ಕೃಷ್ಣಪ್ಪ, ಬೆಂಗಳೂರು ಉತ್ತ ಜಿಲ್ಲಾಧ್ಯಕ್ಷ ಎಸ್.ಹರೀಶ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ರುದ್ರೇಶ್, ರಾಜ್ಯ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ ಹಾಗೂ ಮುಖಂಡರು ಉಪಸ್ಥಿತರಿದ್ದರು.
 
ಬೆಂಗಳೂರಿಗೆ ಈಚೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂಸ್ಥೆಗೆ ಭೇಟಿ ನೀಡಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರಿಗೆ ಶುಭ ಕೋರಿದ್ದರು. ಶ್ರೀ ರವಿಶಂಕರ್ ಗುರೂಜಿ ಆಶ್ರಮಕ್ಕೆ ಭೇಟಿ ನೀಡಿ ಸಿಲ್ಕ್ ಬೋರ್ಡ್ ಮೆಟ್ರೋ ನಿಲ್ದಾಣದಿಂದ ಮೆಜೆಸ್ಟಿಕ್ ತನಕ ಮೆಟ್ರೋದಲ್ಲಿ ಪ್ರಯಾಣಿಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ