Webdunia - Bharat's app for daily news and videos

Install App

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

Krishnaveni K
ಗುರುವಾರ, 17 ಏಪ್ರಿಲ್ 2025 (15:26 IST)
ಬಾಗಲಕೋಟೆ: ಮಾನ್ಯ ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಅವರು ಪ್ರಶ್ನಿಸಿದ್ದಾರೆ.

 ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಸಂದರ್ಭದಲ್ಲಿ ಸರಕಾರದ ವಿರುದ್ಧ ಬಾರುಕೋಲು ಪ್ರದರ್ಶಿಸಿದ ಅವರು ಬಳಿಕ ಸಸಿಗೆ ನೀರೆರೆದರು. ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ ಎಂದು ಹೇಳಿದರು. ಮಾನ್ಯ ಸಿದ್ದರಾಮಯ್ಯನವರೇ, ನೀವು ಮುಖ್ಯಮಂತ್ರಿಗಳಾದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಜನರು ನಿಮ್ಮನ್ನು ನೆನಪಿಸಿಕೊಳ್ಳಬೇಕೇ ಎಂದು ಕೇಳಿದರು.

ಹಿಂದೆ ಯಡಿಯೂರಪ್ಪನವರ ಬಿಜೆಪಿ ಸರಕಾರ ಇದ್ದಾಗ ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಲು 25 ಸಾವಿರ ಕಟ್ಟಿದ್ದರೆ ಸಾಕಾಗಿತ್ತು. ಆದರೆ, ರೈತಪರ ಮೊಸಳೆ ಕಣ್ಣೀರು ಹಾಕುವ ಸಿದ್ದರಾಮಯ್ಯನವರ ಸರಕಾರದಲ್ಲಿ ಎರಡೂವರೆಯಿಂದ 3 ಲಕ್ಷ ರೂ. ಕಟ್ಟಬೇಕಿದೆ ಎಂದು ಟೀಕಿಸಿದರು.
ಹಿಂದೆ 5 ವರ್ಷ ನೀವು ಸಿಎಂ ಆಗಿದ್ದಾಗ ಏನು ಸಾಧನೆ ಮಾಡಿದ್ದೀರಿ ಸಿದ್ದರಾಮಯ್ಯನವರೇ ಎಂದು ಕೇಳಿದರು. ಹಿಂದಿನ ಬಾರಿ ವೀರಶೈವ ಧರ್ಮ ಎಂದು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಲ್ಲವೇ ಎಂದು ಆಕ್ಷೇಪಿಸಿದರು. ಅದಕ್ಕಾಗಿ ರಾಜ್ಯದ ಜನ ನಿಮ್ಮನ್ನು ನೆನಪಿಟ್ಟುಕೊಳ್ಳಬೇಕೇ ಎಂದರು.

ಮುಸಲ್ಮಾನರಿಗೆ ಸರಕಾರಿ ಕಾಮಗಾರಿಯಲ್ಲಿ ಶೇ 4ರಷ್ಟು ಮೀಸಲಾತಿ ಕೊಡುತ್ತಿದ್ದೀರಿ. ಯಾರಪ್ಪನ ದುಡ್ಡು ಸ್ವಾಮಿ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಮುಸಲ್ಮಾನರ ಹೆಣ್ಮಕ್ಕಳಿಗೆ ಮದುವೆಗೆ 50 ಸಾವಿರ ಕೊಡುತ್ತಾರಂತೆ. ಹಿಂದೂಗಳಲ್ಲಿ ಬಡವರಿಲ್ಲವೇ? ಮುಸಲ್ಮಾನ ಯುವಜನರು ವಿದೇಶಕ್ಕೆ ಉನ್ನತ ಶಿಕ್ಷಣ ಪಡೆಯಲು ಹೋಗುವುದಾದರೆ 30 ಲಕ್ಷ ನೀಡುವುದಾಗಿ ಹೇಳಿದ್ದೀರಿ. ಹಿಂದೂಗಳಲ್ಲಿ ಬಡವರಿಲ್ಲವೇ ಹಾಗಿದ್ದರೆ ಎಂದು ಪ್ರಶ್ನಿಸಿದರು. ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಎಂದು ಕೇಳಿದರು.

ರಾಜ್ಯದಲ್ಲಿ ಯಾವುದೇ ಲೋಕಸಭಾ, ವಿಧಾನಸಭಾ ಚುನಾವಣೆ ಇಲ್ಲ. ಆದರೂ, ನಾವು ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದೇವೆ. ಅಭಿವೃದ್ಧಿ ಕೆಲಸ, ಸರ್ವತೋಮುಖ ಅಭಿವೃದ್ಧಿಯ ಭರವಸೆ ನೀಡಿ ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದವರು. ಆದರೆ, ಸಿದ್ದರಾಮಯ್ಯನವರ ನೇತೃತ್ವದ ಜನವಿರೋಧಿ, ರೈತ ವಿರೋಧಿ, ಹಿಂದೂ ವಿರೋಧಿ ಸರಕಾರ ಇದೆ. 50ಕ್ಕೂ ಜನೋಪಯೋಗಿ ವಸ್ತುಗಳ ಬೆಲೆ ಏರಿಸಿದ್ದಾರೆ ಎಂದು ಟೀಕಿಸಿದರು. ಪರಿಶಿಷ್ಟ ಜಾತಿ, ಜನಾಂಗದ 38 ಸಾವಿರ ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಹೆಚ್ಚಾಗಿದೆ ಎಂದು ಆಕ್ಷೇಪಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments