ವಿಷ್ಣುವರ್ಧನ್ ಸಮಾಧಿ ಬಗ್ಗೆ ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ

Krishnaveni K
ಶನಿವಾರ, 30 ಆಗಸ್ಟ್ 2025 (11:11 IST)
ಬೆಂಗಳೂರು: ಸಾಹಸಸಿಂಹ ಡಾ ವಿಷ್ಣುವರ್ಧನ್ ಸಮಾಧಿಯಿದ್ದ ಅಭಿಮಾನ್ ಸ್ಟುಡಿಯೋವನ್ನು ಸರ್ಕಾರ ಮುಟ್ಟುಗೋಲು ಹಾಕಲು ಸೂಚನೆ ನೀಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ವಿಷ್ಣುವರ್ಧನ್ ಸಮಾಧಿಯನ್ನು ಮೊನ್ನೆಯಷ್ಟೇ ಅಭಿಮಾನ್ ಸ್ಟುಡಿಯೋ ಜಾಗದ ಮಾಲಿಕರಾದ ಹಿರಿಯ ನಟ ಬಾಲಣ್ಣ ಕುಟುಂಬದವರು ರಾತ್ರೋ ರಾತ್ರಿ ಕೆಡವಿದ್ದರು. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿವಾದದ ನಡುವೆಯೇ ಈಗ ಸರ್ಕಾರವೇ ಈ ಜಾಗವನ್ನು ವಶಕ್ಕೆ ಪಡೆಯಲು ಮುಂದಾಗಿರುವುದು ಪ್ರಕರಣಕ್ಕೆ ಟ್ವಿಸ್ಟ್ ನೀಡಿದೆ.

ವಿಷ್ಣು ಸಮಾಧಿ ಬಗ್ಗೆ ಬಿವೈ ವಿಜಯೇಂದ್ರ ಟ್ವೀಟ್ ಮಾಡಿದ್ದು ‘ಕನ್ನಡದ ಪ್ರತಿಭಾವಂತ ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿ ನಿರಂತರ ವಿವಾದದಲ್ಲಿ ಸಿಲುಕಿಕೊಂಡಿದ್ದು ನಿಜಕ್ಕೂ ಬೇಸರದ ಸಂಗತಿ.

ವಿಷ್ಣು ಅವರ ಹಾಗೂ ಹಿರಿಯ ನಟ ಟಿ ಎನ್ ಬಾಲಕೃಷ್ಣ ಅವರ ಸಮಾಧಿ ಸ್ಥಳಗಳು ಸ್ಮಾರಕಗಳಾಗಿ ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ಶೀಘ್ರ ನಿರ್ಮಾಣವಾಗಲಿ.  ಅರಣ್ಯ ಭೂಮಿ ಎಂದು ಸದ್ಯ ಅಭಿಮಾನ್ ಸ್ಟುಡಿಯೋ ಜಾಗವದನ್ನು ವಶಪಡಿಸಿಕೊಳ್ಳಲು ಹೊರಟಿರುವ ಸರ್ಕಾರದ ನಿರ್ಧಾರ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮತ್ತೊಂದು ಗೊಂದಲವಾಗಿ ಮಾರ್ಪಡದಿರಲಿ. ಅಭಿಮಾನಿಗಳ ಮನಸ್ಸನ್ನು ಘಾಸಿಗೊಳಿಸದಂತೆ ಸರ್ಕಾರ ನಡೆದುಕೊಳ್ಳಲಿ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments