Select Your Language

Notifications

webdunia
webdunia
webdunia
webdunia

ಜಿದ್ದಾಜಿದ್ದಿನ ಸಮರಕ್ಕೆ ಸಜ್ಜುಗೊಂಡ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ

ಜಿದ್ದಾಜಿದ್ದಿನ ಸಮರಕ್ಕೆ ಸಜ್ಜುಗೊಂಡ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ
ಮೈಸೂರು , ಸೋಮವಾರ, 27 ಮಾರ್ಚ್ 2017 (13:58 IST)
ಉಪಚುನಾವಣೆಯಲ್ಲಿ ಜಯಗಳಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹರಸಾಹಸಪಡುತ್ತಿವೆ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಪ್ರಚಾರ ಕಣಕ್ಕಿಳಿದರೆ, ಮತ್ತೊಂದೆಡೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ರಾಘವೇಂದ್ರ ಕೂಡಾ ಚುನಾವಣಾ ಪ್ರಚಾರದ ಕಣಕ್ಕಿಳಿದಿದ್ದಾರೆ.
 
ಮಹಿಳೆಯರ ಮತಗಳನ್ನು ಸೆಳೆಯಲು ಉಭಯ ಪಕ್ಷಗಳು ಕಸರತ್ತು ನಡೆಸುತ್ತಿವೆ. ಕೆಲ ಗ್ರಾಮಗಳಲ್ಲಿ ಬಿಜೆಪಿ ಮಹಿಳಾ ಸಮಾವೇಶ ಆಯೋಜಿಸಿ ಮಹಿಳೆಯರ ಮನ ಗೆಲ್ಲಲು ಪ್ರಯತ್ನಿಸುತ್ತಿವೆ. 
 
ತಮ್ಮ ಪತಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯೇ ತಮಗೆ ಶ್ರೀರಕ್ಷೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ್ ಪ್ರಸಾದ್ ಭರ್ಜರಿ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಯಡಿಯೂರಪ್ಪ ಸೇರಿದಂತೆ ಬಿಜೆಪಿ ಹಿರಿಯ ನಾಯಕರ ದಂಡು ಪ್ರಚಾರದಲ್ಲಿ ಪಾಲ್ಗೊಂಡಿದೆ. 
 
ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ನಂಜನಗೂಡು ಪಟ್ಟಣದಲ್ಲಿ ಪ್ರಚಾರ ನಡೆಸಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
 
ಅಧಿವೇಶನದ ಮುಕ್ತಾಯದ ನಂತರ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಎರಡೂ ಕ್ಷೇತ್ರಗಳಲ್ಲಿ ವಾಸ್ತವ್ಯ ಹೂಡಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಚಿವ ಎಚ್‌.ವೈ ಮೇಟಿ ಅಳಿಯನ ಭ್ರಷ್ಟಾಚಾರ ಪ್ರಕರಣ: ಇಬ್ಬರ ಅಮಾನತು