Publish Date: Fri, 14 Apr 2017 (17:25 IST)
Updated Date: Fri, 14 Apr 2017 (17:27 IST)
ಉಪಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳಲ್ಲಿ ಚುನಾವಣೆ ಹೇಗೆ ನಡೆದಿದೆ ಎನ್ನುವುದು ಜನತೆಗೆ ತಿಳಿದಿದೆ. ಆದರೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಇಂತಹ ಅಕ್ರಮಗಳು ನಡೆಯಲು ಬಿಡುವುದಿಲ್ಲ ಎಂದರು.
ಅಮಾನತುಗೊಂಡಿರುವ ಜೆಡಿಎಸ್ ಬಂಡಾಯ ಶಾಸಕರ ಬಗ್ಗೆ ಪಕ್ಷದ ಶಿಸ್ತು ಸಮಿತಿ ಶೀಘ್ರ ತೀರ್ಮಾನ ಕೈಗೊಳ್ಳಲಿದೆ ಎಂದರು.
ಉತ್ತರಪ್ರದೇಶದ ಮಾದರಿಯಲ್ಲಿ ಬಿಬಿಎಂಪಿ ಸುತ್ತಮುತ್ತ ಕಸಾಯಿಖಾನೆ ನಿಷೇಧ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಉತ್ತರ ಪ್ರದೇಶದ ಸ್ಥಿತಿಯೇ ಬೇರೆ, ರಾಜ್ಯದ ಸ್ಥಿತಿಯೇ ಬೇರೆಯಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.