Publish Date: Thu, 13 Apr 2017 (14:20 IST)
Updated Date: Thu, 13 Apr 2017 (14:22 IST)
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ಫಲಿತಾಂಶದಿಂದ ಬಿಜೆಪಿ ಅಹಂಗೆ ಗರ್ವಭಂಗವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಇಲ್ಲವೇ ಇಲ್ಲ ಎನ್ನುತ್ತಿರುವವರಿಗೆ ಉಪಚುನಾವಣೆ ಫಲಿತಾಂಶ ತಕ್ಕ ಉತ್ತರ ನೀಡಿದೆ. ಕರ್ನಾಟಕದ ಜನರು ಕಾಂಗ್ರೆಸ್ ಪರ ತೀರ್ಪು ನೀಡಿದ್ದಾರೆ. ಜಯಗಳಿಸಿದ ಇಬ್ಬರು ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಜನತೆ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಬಹುಮತ ನೀಡಿದ್ದರಿಂದ ಬಿಜೆಪಿಗೆ ಮುಖಭಂಗವಾಗಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಹೊಸ ಹುರುಪು ತಂದಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರಕಾರದ ಕಾರ್ಯವೈಖರಿಗೆ ಮೆಚ್ಚಿ ಜನತೆ ಬಹುಮತ ನೀಡಿದ್ದಾರೆ. ಬಿಜೆಪಿಯ ಕೋಮುವಾದಕ್ಕೆ ತಕ್ಕ ಉತ್ತರ ನೀಡಿದ್ದಾರೆ. ಜಾತಿ ಆಧಾರದ ಮೇಲೆ ರಾಜಕೀಯ ನಡೆಯುವುದಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.