Publish Date: Fri, 12 Jul 2019 (09:50 IST)
Updated Date: Fri, 12 Jul 2019 (09:51 IST)
ಬೆಂಗಳೂರು : ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಾ.ರಾ.ಮಹೇಶ್ ರನ್ನು ಸಿಎಂ ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮತ್ತು ಈಶ್ವರಪ್ಪ ಜೊತೆ ಸಾ.ರಾ ಮಹೇಶ್ ಗುರುವಾರ ರಾತ್ರಿ ರಹಸ್ಯ ಸಭೆ ನಡೆಸಿದ್ದರು. ಇದು ಮಾಧ್ಯಮದವರ ಕಣ್ಣಿಗೆ ಬಿದ್ದು ಬಟ್ಟಬಯಲಾಯಿತು. ಈ ಭೇಟಿ ವಿಚಾರ ತಿಳಿದು ಮೈತ್ರಿ ಪಕ್ಷದ ನಾಯಕರು ಸಿಡಿಮಿಡಿಗೊಂಡಿದ್ದಾರೆ.
ಈ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಸಾರಾ ಮಹೇಶ್ ರನ್ನ ಕರೆಯಿಸಿಕೊಂಡು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.