Publish Date: Mon, 04 Nov 2019 (15:11 IST)
Updated Date: Mon, 04 Nov 2019 (15:14 IST)
ಚಿತ್ರದುರ್ಗ : ಎಲ್ಲರೂ ಒಟ್ಟಾಗಿ ಮದ್ಯ ನಿಷೇಧದ ಬಗ್ಗೆ ಧ್ವನಿ ಎತ್ತಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಕರೆ ಕೊಟ್ಟಿದ್ದಾರೆ.
ಹೊಸದುರ್ಗಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಎಲ್ಲರೂ ಒಟ್ಟಾಗಿ ಧ್ವನಿ ಎತ್ತಿದರೆ ಸರ್ಕಾರವೂ ಅನೈತಿಕ ಆದಾಯವನ್ನು ಬಯಸುವುದಿಲ್ಲ. ನೀವು ಬೆಂಬಲ ನೀಡುವುದಾದರೆ ನಾನು ಸಹ ಸಂಪುಟದ ಒಳಗೆ ಹಾಗು ಹೊರಗೆ ಮದ್ಯಪಾನ ನಿಷೇಧದ ಪರ ಧ್ವನಿ ಎತ್ತುತ್ತೇನೆ ಎಂದು ಹೇಳಿದ್ದಾರೆ.
ಅನೈತಿಕ ಮೂಲದ ಆದಾಯವನ್ನು ವ್ಯಕ್ತಿಯೂ ಹೊಂದಬಾರದು, ಸರ್ಕಾರವೂ ಹೊಂದಬಾರದು. ಮತಕ್ಕಾಗಿ ರಾಜಕೀಯ ಮಾಡುವವರು ನಾವಲ್ಲ. ಸಿದ್ದಾಂತದ ಹಿನ್ನಲೆ ನಾವು ರಾಜಕೀಯಕ್ಕೆ ಬಂದಿದ್ದೇವೆ. ಹೀಗಾಗಿ ಕೆಲವೊಮ್ಮೆ ನಿಷ್ಠುರವಾಗಿ ಮಾತನಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.