Publish Date: Thu, 22 Mar 2018 (10:16 IST)
Updated Date: Thu, 22 Mar 2018 (10:20 IST)
ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಗೂಂಡಾಗಿರಿ ಪ್ರಕರಣ ದಾಖಲಾಗಿದೆ. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಭಾಮೈದನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ಮಧ್ಯರಾತ್ರಿ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ.
ಮಿಥುನ್ ರೆಡ್ಡಿ ಎಂಬಾತ ತಿಪ್ಪೇಸ್ವಾಮಿ ಎಂಬ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಓವರ್ ಟೇಕ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ ಮಿಥುನ್ ರೆಡ್ಡಿ ತಾನು ಶಾಸಕ ಸತೀಶ್ ರೆಡ್ಡಿ ಭಾಮೈದ ಎಂದು ಈ ವೇಳೆ ಧಮಕಿ ಹಾಕಿದ್ದ ಎನ್ನಲಾಗಿದೆ. ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಆದರೆ ಈ ಬಗ್ಗೆ ಖಾಸಗಿ ವಾಹಿನಿಗೆ ಹೇಳಿಕೆ ನೀಡಿರುವ ಸತೀಶ್ ರೆಡ್ಡಿ ಆತ ತನ್ನ ಭಾಮೈದ ಅಲ್ಲ. ಯಾರೋ ಕಿಡಿಗೇಡಿಗಳು ನನ್ನ ಹೆಸರು ದುರುಪಯೋಗಪಡಿಸಿದ್ದಾರೆ ಎಂದಿದ್ದಾರೆ. ಇದೀಗ ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ