Publish Date: Mon, 15 Aug 2022 (14:07 IST)
Updated Date: Mon, 15 Aug 2022 (13:37 IST)
ಬೆಂಗಳೂರು : ಬಾಗಲಕೋಟೆ ಜಿಲ್ಲೆ ಬೀಳಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಘಟಪ್ರಭಾ ಯೋಜನೆಯಡಿ 411.10 ಕೋಟಿ ರೂ. ಮೊತ್ತದ ಅನವಾಲ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಘಟಪ್ರಭಾ ಯೋಜನೆಯಡಿ, ಅನವಾಲ ಏತ ನೀರಾವರಿಯಲ್ಲಿ 3.64 ಟಿಎಂಸಿ ನೀರಿನ ಅವಶ್ಯಕತೆಯಾಗಿದ್ದು, ಇದರ ಅನುಷ್ಠಾನದಿಂದ ಸಾವಿರಾರು ರೈತರಿಗೆ ನೀರಾವರಿ ಸೌಲಭ್ಯ ಸಿಗಲಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಿಕೊಟ್ಟಿದರು.