Publish Date: Tue, 07 Aug 2018 (18:50 IST)
Updated Date: Tue, 07 Aug 2018 (18:52 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಷಾಢ ಬಳಿಕ ನಡೆಯುವುದು ಬಹುತೇಕ ಪಕ್ಕಾ ಆದಂತಿದೆ. ಹೀಗಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಹಾಗೂ ಪ್ರಭಾವಿ ಖಾತೆಗಳ ಮೇಲೆ ಕಣ್ಣಿಟ್ಟಿರುವ ನಾಯಕರು ಒತ್ತಡ ತಂತ್ರಕ್ಕೆ ಮೊರೆಹೋಗಿದ್ದಾರೆ.
ಕಾಂಗ್ರೆಸ್ ನ ಹಿರಿಯ ಶಾಸಕರಾದ ಎಂ.ಬಿ.ಪಾಟೀಲ್, ರೋಷನ್ ಬೇಗ್, ಪ್ರತಾಪಗೌಡ, ಆರ್.ಬಿ.ತಿಮ್ಮಾಪುರ ಸೇರಿದಂತೆ ಡಜನ್ ಗಿಂತಲೂ ಹೆಚ್ಚು ಶಾಸಕರು ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ತಮ್ಮ ಗಾಡ್ ಫಾದರ್ ಗಳ ಮೂಲಕ ಹೈಕಮಾಂಡ್ ಮೇಲೆ ಪ್ರಭಾವ ಬೀರಿ ಸ್ಥಾನ ಗಿಟ್ಟಿಸಿಕೊಳ್ಳಲು ಪ್ರಯತ್ನ ಮುಂದುವರಿಸಿದ್ದಾರೆ.
ಏತನ್ಮಧ್ಯೆ ವಿವಿಧ ಇಗಮ, ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಕಟ್ಟಿರುವ ಮಾಜಿ ಶಾಸಕರು, ಹಾಲಿ ಶಾಸಕರು ಹಾಗೂ ಮುಖಂಡರೂ ಸಹ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.