Select Your Language

Notifications

webdunia
webdunia
webdunia
webdunia

ಜೂನ್ ‌20ರೊಳಗೆ ಸಚಿವ ಸಂಪುಟ ವಿಸ್ತರಣೆ?

ಜೂನ್ ‌20ರೊಳಗೆ ಸಚಿವ ಸಂಪುಟ ವಿಸ್ತರಣೆ?
ಬೆಂಗಳೂರು , ಸೋಮವಾರ, 5 ಜೂನ್ 2017 (15:28 IST)
ಮುಂಗಾರು ಅಧಿವೇಶನ ಮುಕ್ತಾಯವಾದ ಕೂಡಲೇ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಮುಂಬರುವ ಜೂನ್‌ 16 ರವರೆಗೆ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಜೂನ್ 16 ರ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
 
ಬಲ್ಲ ಮೂಲಗಳ ಪ್ರಕಾರ, ಜೂನ್ 18 ಅಥವಾ 19 ರಂದು ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ. ಬಹುತೇಕ ಜೂನ್‌ 20 ರೊಳಗೆ ಸಚಿವ ಸಂಪುಟ ವಿಸ್ತರಣೆ ಮುಕ್ತಾಯಗೊಳ್ಳಲಿದೆ ಎನ್ನಲಾಗಿದೆ.
 
ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಸಿದ್ದರಾಮಯ್ಯನವರಿಗೆ ಸಚಿವ ಸ್ಥಾನ ನೀಡುವಂತೆ ರಾಜಕೀಯ ಪ್ರಭಾವ ಬಳಸುತ್ತಿದ್ದಾರೆ ಎನ್ನಲಾಗಿದೆ. ಕೆಲವರು ದೆಹಲಿ ಹೈಕಮಾಂಡ್‌ನಲ್ಲಿರುವ ಗಾಡ್‌ಫಾದರ್‌ಗಳ ಮೂಲಕ ಸಚಿವ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್ಆಡಿ 2.5 ಲಕ್ಷ ರೂಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿಭಾಗವಹಿಸಲು  ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

:ವೇಶ್ಯಾವಾಟಿಕೆ ಆರೋಪ : ಹುಬ್ಬಳ್ಳಿಯ ಕೆಲ ಲಾಡ್ಜ್`ಗಳ ಮೇಲೆ ದಾಳಿ, ಲೈಸೆನ್ಸ್ ಕ್ಯಾನ್ಸಲ್