ಬೆಂಗಳೂರು: ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಹೈಕಮಾಂಡ್, ಸಿಎಂ ಹಾಗೂ ಡಿಸಿಎಂ ಏನು ಚರ್ಚಿಸಿದ್ದಾರೆಂಬುದು ಗೊತ್ತಿಲ್ಲ. ಈ ಸಂಬಂಧ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ಮಾತಾಡಿದ ಪರಮೇಶ್ವರ್ ಅವರು, ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡುವ ವಿಚಾರ ಸಿಎಂ ವಿವೇಚನೆಗೆ ಬಿಟ್ಟಿದ್ದು. ಇದೆಲ್ಲ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಹಾಗೂ ಗೊತ್ತೇ ಆಗುವುದಿಲ್ಲ ಎಂದರು.
ಈ ಬೆಳವಣಿಗೆ ಎಲ್ಲ ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದು. ಇದೆಲ್ಲ ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ನಮಗೆ ಗೊತ್ತೇ ಆಗೋದಿಲ್ಲ. ಕೆಲವರು ಅವರವರ ಅಭಿಪ್ರಾಯ ಹೇಳ್ತಾರೆ. ಎರಡೂವರೆ ವರ್ಷಕ್ಕೆ ಸಂಪುಟ ಪುನಾರಚನೆ ಆಗಬೇಕು ಅಂತ ಹೇಳ್ಕೊಂಡು ಬರ್ತಿದ್ದಾರಲ್ಲ ಇದರ ಬಗ್ಗೆ ನಮಗ್ಯಾರಿಗೂ ಗೊತ್ತೇ ಇಲ್ಲ. ಹೈಕಮಾಂಡ್‌ನವರು ಯಾರೂ ಹೇಳಿಲ್ಲ, ಅಥವಾ ಸಿಎಂ ಆಗಲೀ ಅಧ್ಯಕ್ಷರಾಗಲೀ ನಮಗೆ ಇದರ ಬಗ್ಗೆ ಹೇಳಿಲ್ಲ. ಒಳಗೆ ಅವರು ಏನು ಅಂಡರ್‌ಸ್ಟ್ಯಾಂಡಿಂಗ್‌ಗೆ ಬಂದಿದ್ದಾರೋ ಗೊತ್ತಿಲ್ಲ ಎಂದರು.