Select Your Language

Notifications

webdunia
webdunia
webdunia
webdunia

ಇನ್ನೆರಡು ದಿನದಲ್ಲಿ ಸಂಪುಟ ವಿಸ್ತರಣೆ ಖಚಿತ: ಬಿಎಸ್‌ ಯಡಿಯೂರಪ್ಪ

BENAGLURU , ಮಂಗಳವಾರ, 3 ಮೇ 2022 (16:27 IST)
ಇನ್ನೆರೆಡು ದಿನದಲ್ಲಿ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರಚನೆ ಆಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ನಿಶ್ಚಿತವಾಗಲಿದೆ. ಈ ಬಗ್ಗೆ ಅಮಿತ್‌ ಶಾ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಇದೆ ಎಂದರು.
ಅಮಿತ್‌ ಶಾ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ನಿರ್ಧರಿಸಿ ಬಂದಿದ್ದಾರೆ. ಈ ಬಗ್ಗೆ ರಾಜ್ಯದ ಮುಖಂಡರ ಜೊತೆ ಚರ್ಚಿಸಿ ಪ್ರಕಟಿಸಬಹುದು ಅಥವಾ ದೆಹಲಿಗೆ ಮರಳಿದ ನಂತರ ಪ್ರಕಟಿಸಬಹುದು ಎಂದರು.
ಇದೇ ವೇಳೆ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾವುದೇ ಮಾಹಿತಿ ನನಗೆ ಬಂದಿಲ್ಲ. ಅದೆಲ್ಲಾ ಊಹಾಪೋಹ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪೋಷಕರು ಓದು ಎಂದಿದ್ದೇ ತಪ್ಪಾಯ್ತ!?