Publish Date: Thu, 06 Sep 2018 (17:44 IST)
Updated Date: Thu, 06 Sep 2018 (17:47 IST)
ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ರಾಜ್ಯ ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆ ಇನ್ನೊಂದೆಡೆ ಅತೃಪ್ತ ನಾಯಕರ ಪಾಳೆಯದಲ್ಲಿ ಲಾಬಿ ಬಿರುಸುಗೊಂಡಿದೆ.
ಸೆಪ್ಟಂಬರ್ ಮೂರನೇ ವಾರದಲ್ಲಿ ರಾಜ್ಯದ ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆ ಆಗುವುದು ಬಹುತೇಕ ಪಕ್ಕಾ ಆಗಿದೆ. ಹೀಗಾಗಿ ಮುಹೂರ್ತ ಫಿಕ್ಸ್ ಆಗಿರುವ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನಕ್ಕಾಗಿ ಆಂತರಿಕವಾಗಿ ಭಾರಿ ಪೈಪೋಟಿ ಶುರುವಾಗಿದೆ.
ಕೈ ಪಾಳೆಯದಲ್ಲಿ ಖಾಲಿ ಇರುವ 6 ಸಚಿವ ಸ್ಥಾನಗಳಿಗೆ 15ಕ್ಕೂ ಹೆಚ್ಚು ಶಾಸಕರು ಸಚಿವ ಸ್ಥಾನದ ರೇಸ್ ನಲ್ಲಿ ಇದ್ದಾರೆ. ಸಚಿವ ಸ್ಥಾನಕ್ಕಾಗಿ ತಮ್ಮದೇ ಆದ ಮಾರ್ಗದಲ್ಲಿ ಶಾಸಕರು ಒಂದೆಡೆ ಲಾಬಿ ನಡೆಸುತ್ತಿದ್ದಾರೆ. ಮತ್ತೊಂದೆಡೆ ಅತೃಪ್ತ ಶಾಸಕರನ್ನು ಸಮಾಧಾನ ಪಡಿಸಲು ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರು ಹಾಗೂ ಪ್ರಮುಖರು ಕಸರತ್ತು ನಡೆಸುತ್ತಿದ್ದಾರೆ.