Select Your Language

Notifications

webdunia
webdunia
webdunia
webdunia

ರಾಜ್ಯ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ; ಸಚಿವ ಸ್ಥಾನಕ್ಕೆ ಆಯ್ಕೆಯಾದ ಕಾಂಗ್ರೆಸ್ ನಾಯಕರು ಹೇಳಿದ್ದೇನು?

ರಾಜ್ಯ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ;  ಸಚಿವ ಸ್ಥಾನಕ್ಕೆ ಆಯ್ಕೆಯಾದ ಕಾಂಗ್ರೆಸ್ ನಾಯಕರು ಹೇಳಿದ್ದೇನು?
ಬೆಂಗಳೂರು , ಶನಿವಾರ, 22 ಡಿಸೆಂಬರ್ 2018 (11:17 IST)
ಬೆಂಗಳೂರು : ರಾಜ್ಯ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ  ಕಾರ್ಯ ಕೊನೆಗೂ ಅಂತ್ಯವಾಗಿದ್ದು, ಕಾಂಗ್ರೆಸ್ ನ 8 ಶಾಸಕರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದಾರೆ.


ಸತೀಶ್ ಜಾರಕಿಹೊಳಿ, ಆರ್.ಬಿ.ತಿಮ್ಮಾಪುರ, ಸಿ.ಎಸ್.ಶಿವಳ್ಳಿ, ಇ.ತುಕಾರಾಂ, ಎಂ.ಟಿ.ಬಿ.ನಾಗರಾಜ್, ರಹೀಂಖಾನ್, ಪಿ.ಟಿ.ಪರಮೇಶ್ವರ್ ನಾಯ್ಕ್ ಮತ್ತು ಎಂ.ಬಿ.ಪಾಟೀಲ್ ಗೆ ಮಂತ್ರಿ ಸೀಟು ಸಿಗುವುದು ಖಚಿತ ಆಗಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಸತೀಶ್ ಜಾರಕಿಹೊಳಿ,ಸಂಪುಟ ವಿಸ್ತರಣೆಯಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ, ನಾನಾಗಿರಬಹುದು, ಬೇರೆಯವರಾಗಿಬರಹುದು ತೊಂದರೆ ಆಗಲ್ಲ, ನಾನು ಎರಡು ವರ್ಷದ ನಂತರ ಸಚಿವ ಸ್ಥಾನ ಸಿಗಬಹುದು ಎಂದು ನಿರೀಕ್ಷೆ ಇಟ್ಟುಕೊಂಡಿದ್ದೆ, ಆದರೆ, ಈಗಲೇ ಕೊಟ್ಟಿದ್ದಾರೆ. ನಮ್ಮ ಜಿಲ್ಲೆಯ ಎಲ್ಲಾ ಶಾಸಕರು ಸೇರಿ ಜಿಲ್ಲೆಯ ಅಭಿವೃದ್ಧಿಯ ಕಡೆಗೆ ಶ್ರಮಿಸುತ್ತೇವೆ’ ಎಂದು ಹೇಳಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಸಿ.ಎಸ್.ಶಿವಳ್ಳಿ,’ಸಚಿವ ಸ್ಥಾನ ಸಿಕ್ಕಿದಕ್ಕೆ ಖುಷಿಯಾಗಿದೆ. ನಮ್ಮ ಪಕ್ಷದ ಎಲ್ಲಾ ನಾಯಕರುಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಜನರ ಜೊತೆ ಬೆರೆತು ಕೆಲಸ ಮಾಡುವ ಖಾತೆ ಕೊಟ್ರೆ ಒಳ್ಳೆಯದು. ಯಾವುದೇ ಖಾತೆ ನೀಡಿದರೂ ನಿಭಾಯಿಸಲು ಸಿದ್ಧನಿದ್ದೇನೆ. ಅಸಮಾಧಾನಗೊಂಡ ಕಾಂಗ್ರೆಸ್ ನಾಯಕರನ್ನು ಪಕ್ಷ ಸರಿಪಡಿಸುತ್ತದೆ’ ಎಂದು ಹೇಳಿದ್ದಾರೆ.


 

Share this Story:

Follow Webdunia kannada

ಮುಂದಿನ ಸುದ್ದಿ

ರಾಮಲಿಂಗರೆಡ್ಡಿಗೆ ಕೈ ತಪ್ಪಿದ ಸಚಿವ ಸ್ಥಾನ; ಪಕ್ಷದ ವಿರುದ್ಧ ಗರಂ ಆದ ಪುತ್ರಿ,ಶಾಸಕಿ ಸೌಮ್ಯ ರೆಡ್ಡಿ