ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ-ಸಿಎಂ ಯಡಿಯೂರಪ್ಪ

ಭಾನುವಾರ, 4 ಆಗಸ್ಟ್ 2019 (11:48 IST)
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳುವುದರ ಮೂಲಕ ಸಿಎಂ ಯಡಿಯೂರಪ್ಪ ಅವರು ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ನಾಳೆ ಸಂಜೆ ದೆಹಲಿಗೆ ತೆರಳಲಿದ್ದೇನೆ. ನಮ್ಮ ನಾಯಕರು ಸೂಚನೆ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ ಮಾಡಲಾಗುವುದು. ಅಲ್ಲಿಯವರೆಗೆ ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.


ಹಾಗೇ ನವ ನಿರ್ಮಾಣ ಯೋಜನೆ ಅನುದಾನ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಹೀಗೆ ಸೂಚನೆ ನೀಡಿಲ್ಲ. ಯೋಜನೆ ಅಡಿಯಲ್ಲಿ ಬೇಕಾಬಿಟ್ಟಿ ಹಣ ಖರ್ಚಾಗುತ್ತಿತ್ತು. ಕೆಲವೊಂದು ಕಡೆ ಅನಗತ್ಯವಾಗಿ ಹಣ ವೆಚ್ಚ ಮಾಡಲಾಗುತ್ತಿತ್ತು. ಹೀಗಾಗಿ ಅನುದಾನ ತಡೆಹಿಡಿಯಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಯಾವುದೇ ಕಾರಣಕ್ಕೂ ಇನ್ನೊಮ್ಮೆ ಕಾಂಗ್ರೆಸ್​ ಕಡೆ ತಿರುಗಿಯೂ ನೋಡುವುದಿಲ್ಲ- ಬಿ.ಸಿ. ಪಾಟೀಲ್