Select Your Language

Notifications

webdunia
webdunia
webdunia
webdunia

ಸಚಿವ ಸಂಪುಟ ವಿಚಾರ: ಕೈ ನಾಯಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೊಟ್ಟ ಕಿವಿಮಾತು ಇಲ್ಲಿದೆ

Karnataka CM Post Row

Sampriya

ರಾಮನಗರ , ಬುಧವಾರ, 29 ಅಕ್ಟೋಬರ್ 2025 (15:38 IST)
ರಾಮನಗರ: ಚರ್ಚೆಯಾಗುತ್ತಿರುವ ರಾಜ್ಯ ಸಚಿವ ಸಂಪುಟ ವಿಚಾರ ಸಂಬಂಧ ನಾವು ಮಾತನಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. 

ರಾಮನಗರದಲ್ಲಿ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಸಚಿವರಿಗೆ ಕೋಕ್ ಕೊಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು,  ಇದುವರೆಗೆ ಯಾರು, ಏನು ಮಾತನಾಡಿದ್ದಾರೆಂದು ಗೊತ್ತಿಲ್ಲ. ಎಲ್ಲರಿಗೂ ಹೇಳುವುದೇನೆಂದರೆ ನಾವು ಮಾತನಾಡಿದಷ್ಟು ಪಕ್ಷಕ್ಕೆಯೇ ಹಾನಿ ಎಂದರು.  

ಇನ್ನೂ ರಾಜ್ಯ ಬಿಜೆಪಿಯಲ್ಲಿರುವಷ್ಟು ಬಣ ನಮ್ಮಲ್ಲಿ ಇಲ್ಲ. ನಮ್ಮಲ್ಲಿ ಏನೇ ಇದ್ದರೂ ನಾಲ್ಕು ಗೋಡೆ ಮಧ್ಯೆ ಚರ್ಚೆ ಮಾಡಬೇಕು. ಮಾಧ್ಯಮಗಳ ಮುಂದೆ ಮಾತನಾಡಿದ್ರೆ ವಿಪಕ್ಷಗಳಿಗೆ ಆಹಾರ ಆಗುತ್ತೇವೆ. ಇದನ್ನ ಎಲ್ಲರೂ ಅರ್ಥ ಮಾಡಿಕೊಂಡು ನಡೆದುಕೊಳ್ಳಬೇಕೆಂದು ಕೈ ನಾಯಕರಿಗೆ ಸಲಹೆ ನೀಡಿದರು. 

ಇನ್ನೂ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಕ್ಕೆ ಹೈಕೋರ್ಟ್ ತಡೆ ವಿಚಾರ ಕುರಿತು ಮಾತನಾಡಿ, ಸರ್ಕಾರದ ಸರ್ಕ್ಯುಲರ್ ಮೇಲೆ ಕೋರ್ಟ್ ಆದೇಶ ಮಾಡಿದೆ. ಮುಖ್ಯಮಂತ್ರಿಗಳು ಅಪೀಲ್ ಹಾಕುತ್ತೇವೆ ಅಂತ ಹೇಳಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ವಯನಾಡು ಪ್ರವಾಸೋದ್ಯಮಕ್ಕೆ ಕರ್ನಾಟಕದಿಂದ ಜಾಹೀರಾತು: ಪ್ರಿಯಾಂಕಗಾಗಿ ಎಂದು ಟೀಕಿಸಿದ ಸಿಟಿ ರವಿ