Webdunia - Bharat's app for daily news and videos

Install App

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

Sampriya
ಬುಧವಾರ, 18 ಜೂನ್ 2025 (18:03 IST)
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಜೂನ್ 19 ರಂದು ಮಧ್ಯಾಹ್ನ 12 ಗಂಟೆಗೆ ನಡೆಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯನ್ನು ಇದೀಗ ದಿಢೀರನೇ ವಿಧಾನಸೌಧಕ್ಕೆ ಸ್ಥಳಾಂತರಿಸಲಾಗಿದೆ.

ನಂದಿ ಹಿಲ್ಸ್‌ನಲ್ಲಿ ಪ್ರತಿಭಟನೆ ನಡೆಸಲು ರೈತರು ಯೋಜಿಸಿದ್ದರಿಂದ ಮಾವು ಬೆಳೆಗಾರರ ​​ಕೋಪಕ್ಕೆ ಸರ್ಕಾರ ಹೆದರಿದೆ ಎನ್ನಲಾಗಿದೆ. ರೈತರ ಆಕ್ರೋಶದಿಂದ ಆಗುವ ಮುಜುಗರಿಂದ ತಪ್ಪಿಸಿಕೊಳ್ಳಲು ಸರ್ಕಾರ ಸಚಿವ ಸಂಪುಟ ಸಭೆಯನ್ನು ಸ್ಥಳಾಂತರಿಸಿದೆ. 

ವಿಶೇಷ ಸಚಿವ ಸಂಪುಟ ಸಭೆಗಾಗಿ ಕಳೆದ ಒಂದು ವಾರದಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ಶ್ರಮವಹಿಸಿ ಸಾಕಷ್ಟು ಕೆಲಸ ಕಾರ್ಯಗಳನ್ನು ಕೈಗೊಂಡಿದ್ದರು. ನಂದಿ ಬೆಟ್ಟವನ್ನು ಮಧುವಣಗಿತ್ತಿಯಂತೆ ಶೃಂಗಾರ ಮಾಡಲಾಗಿತ್ತು. ಅಂತಿಮ ಹಂತದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಸಭೆ ದಿಢೀರ್ ರದ್ದಾದ ಹಿನ್ನೆಲೆ ಅಧಿಕಾರಿಗಳಲ್ಲಿ ನಿರಾಸೆ ಮೂಡಿಸಿದೆ.

ಅಭಿವೃದ್ಧಿ ವಿಚಾರದಲ್ಲಿ ಘೋಷಣೆ ಸೇರಿದಂತೆ ಕೆಲವು ನಿರ್ಧಾರಗಳು ಇನ್ನೂ ಕಾರ್ಯಗತಗೊಳ್ಳದ ಹಿನ್ನೆಲೆಯಲ್ಲಿ ಕ್ಯಾಬಿನೆಟ್ ಸಭೆಯನ್ನು ಸ್ಥಳಾಂತರಿಸಲು ಸರ್ಕಾರ ನಿರ್ಧರಿಸಿದೆ. ಆದರೆ, ಶೀಘ್ರದಲ್ಲೇ ನಂದಿ ಹಿಲ್ಸ್‌ನಲ್ಲಿ ಸಚಿವ ಸಂಪುಟ ಸಭೆಗೆ ಮರು ದಿನಾಂಕ ನಿಗದಿಪಡಿಸಲಾಗುವುದು ಎಂದು ಅಧಿಕೃತ ಮೂಲಗಳು ಹೇಳಿವೆ.

ಮಾವು ರೈತರ ಬೇಡಿಕೆಗಳನ್ನು ಸರ್ಕಾರ ಕಡೆಗಣಿಸಿರುವುದನ್ನು ವಿರೋಧಿಸಿ ಜೂನ್ 17 ರಂದು ಮುಳಬಾಗಿಲು ಜೆಡಿಎಸ್ ಶಾಸಕರಾದ ಸಮೃದ್ಧಿ ಮಂಜುನಾಥ್ ಮತ್ತು ಶ್ರೀನಿವಾಸಪುರ ಕ್ಷೇತ್ರದ ವೆಂಕಟಶಿವಾರೆಡ್ಡಿ ಅವರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದ್ದರು. ನಂದಿ ಹಿಲ್ಸ್‌ನಲ್ಲಿ ನಡೆಯುವ ಸಂಪುಟ ಸಭೆ ವೇಳೆಯಲ್ಲಿ ರೈತರು ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರೊಂದಿಗೆ ಪ್ರತಿಭಟನೆ ಮಾಡಲು ಯೋಜಿಸಿದ್ದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments