ಮಹಿಳೆಯರಿಗೆ ಒಂದು ದಿನ ಋತು ಚಕ್ರ ರಜೆ ನೀಡಲು ಸಚಿವ ಸಂಪುಟ ಅಸ್ತು

Sampriya
ಗುರುವಾರ, 9 ಅಕ್ಟೋಬರ್ 2025 (17:01 IST)
ಬೆಂಗಳೂರು: ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ಋತು ಚಕ್ರ ರಜೆ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

ರಾಜ್ಯದಲ್ಲಿರುವ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ‘ಋತು ಚಕ್ರ ರಜೆ ನೀತಿ 2025’ ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಈ ವಿಚಾರವನ್ನು ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಹೇಳಿದರು. 

ಋತುಚಕ್ರದ ಆರೋಗ್ಯವನ್ನು ಮಹಿಳೆಯರ ಹಕ್ಕುಗಳು ಮತ್ತು ಕೆಲಸದ ಸ್ಥಳದ ಕಲ್ಯಾಣದ ಮೂಲಭೂತ ಅಂಶವೆಂದು ಪರಿಗಣಿಸಿ ಅದರ ಮಹತ್ವವನ್ನು ಗುರುತಿಸಿದೆ.

ಋತುಚಕ್ರ ರಜೆ ನೀತಿಯು ಮಹಿಳೆಯರು ಯಾವುದೇ ಕಳಂಕ ಅಥವಾ ಪರಿಣಾಮಗಳ ಭಯವಿಲ್ಲದೆ ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಲು ಈ ತೀರ್ಮಾಣವನ್ನು ಕೈಗೊಳ್ಳಲಾಗಿದೆ. 

ಋತುಚಕ್ರ ರಜೆಗೆ ದೇಶದಲ್ಲಿ ನಿರ್ದಿಷ್ಟವಾಗಿ ಯಾವುದೇ ಶಾಸನವಿಲ್ಲದಿದ್ದರೂ ಹಲವಾರು ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಕಂಪನಿಗಳು ತಮ್ಮ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ನೀಡುವ ನೀತಿಗಳನ್ನು ಅಳವಡಿಸಿಕೊಂಡಿವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಸಿದ್ದರಾಮಯ್ಯ ಪಕ್ಷದ ಆಸ್ತಿ, ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಮುಂದಿನ ಸುದ್ದಿ
Show comments