ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪರಮಾಧಿಕಾರ ನೀಡಿದ್ದು 14 ಸಚಿವರನ್ನು ಬದಲಿಸುವ ಸಿಎಂ ನಿರ್ಧಾರಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ಮುಖ್ಯಮಂತ್ರಿಗಳ ಪರಮಾಧಿಕಾರವನ್ನು ಪ್ರಶ್ನಿಸಿದ ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್, ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ಹಿರಿಯ ಸಚಿವರನ್ನು ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಒಟ್ಟು 14 ಸಚಿವರನ್ನು ಕೈಬಿಡಲಾಗುತ್ತಿದ್ದು 12 ಸ್ಥಾನಗಳಿಗೆ ಸಚಿವರನ್ನು ಆಯ್ಕೆ ಮಾಡಲಾಗುವುದು. ಉಳಿದ ಎರಡು ಸ್ಥಾನಗಳನ್ನು ಖಾಲಿಬಿಡಲು ನಿರ್ಧರಿಸಿದ್ದು, ಹೆಚ್ಚಿನ ಒತ್ತಡ ಬಂದಲ್ಲಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕಾಗಿ ಎರಡು ಸ್ಥಾನಗಳನ್ನು ಮೀಸಲಾಗಿಡಲಾಗಿದೆ.
ಎಸ್.ಆರ್ ಪಾಟೀಲ್, ಕಿಮ್ಮನೆ ರತ್ನಾಕರ್, ಅಂಬರೀಶ್, ದಿನೇಶ್ ಗುಂಡೂರಾವ್ ಬಾಬಾರಾವ್ ಚಿಂಚನಸೂರು ಖಮರುಲ್ ಇಸ್ಲಾಂ, ವಿನಯ್ ಕುಮಾರ್ ಸೊರಕೆ ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ, ಪಿ.ಟಿ. ಪರಮೇಶ್ವರ್ ನಾಯ್ಕ, ಅಭಯ್ ಚಂದ್ರ ಜೈನ್, ಶಾಮನೂರು ಶಿವಶಂಕರಪ್ಪ, ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ