Webdunia - Bharat's app for daily news and videos

Install App

ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡಬಾರದಂತೆ ಅಭಿಯಾನ?

Webdunia
ಸೋಮವಾರ, 25 ಏಪ್ರಿಲ್ 2022 (08:40 IST)
ಬೆಂಗಳೂರು : ಹಿಜಬ್, ಹಲಾಲ್, ಅಜಾನ್ ಬೆನ್ನೆಲೆ ಇದೀಗ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಹಿಂದೂ ಪರ ಸಂಘಟನೆಗಳು ಅಭಿಯಾನ ಶುರುವಾಗಿದೆ.

ಮೇ 3ರಂದು ಅಕ್ಷಯ ತೃತೀಯ ಹಬ್ಬವಿದ್ದು, ಈ ವಿಶೇಷ ದಿನ ಸಾಮಾನ್ಯವಾಗಿ ಜನರು ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಈ ಹಿನ್ನೆಲೆ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಟ್ವಿಟ್ಟರ್ನಲ್ಲಿ  ಹಿಂದೂ ಪರ ಸಂಘಟನೆಗಳು ಅಭಿಯಾನ ಪ್ರಾರಂಭವಾಗಿದೆ.

ರಾಜ್ಯದಲ್ಲಿ ಸರಿ ಸುಮಾರು ಮೂವತ್ತು ಸಾವಿರ ಚಿನ್ನದಂಗಡಿಗಳಿವೆ. ಅದರಲ್ಲಿ ಶೇಕಡಾ 30 ರಷ್ಟು ಮುಸ್ಲಿಂ ಮಾಲೀಕತ್ವದ ಮಳಿಗೆಗಳಿದ್ದು, ಬಹುತೇಕ ಮುಸ್ಲಿಂ ವ್ಯಾಪಾರಿಗಳು ಕೇರಳ ಮೂಲದ ಮುಸ್ಲಿಂ ವ್ಯಾಪಾರಿಗಳಾಗಿದ್ದಾರೆ.

ಕಳೆದ ಎರಡು ವರ್ಷದಿಂದ ಕೊರೊನಾ ಹಿನ್ನೆಲೆ ವ್ಯಾಪಾರ ಡಲ್ ಆಗಿತ್ತು. ಆದರೆ ಈ ವರ್ಷದ ಅಕ್ಷಯ ತೃತೀಯಕ್ಕೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿ ಚಿನ್ನದ ಅಂಗಡಿ ಮಾಲೀಕರಿದ್ದಾರೆ. 

ಅಕ್ಷಯ ತೃತೀಯ ದಿನದಂದೇ ರಾಜ್ಯಾದ್ಯಂತ ಬರೋಬ್ಬರಿ ಒಂದು ಸಾವಿರ ಕೋಟಿ ವ್ಯಾಪಾರವಾಗುಚ ನಿರೀಕ್ಷೆಯನ್ನು ಮಾಲೀಕರು ಹೊಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments