Daily Horoscope
✕

ಡಿಐಜಿ ರೂಪಾ ವರ್ಗಾವಣೆ ವಿರೋಧಿಸಿ ಬಿಎಸ್‌ವೈ ನೇತೃತ್ವದಲ್ಲಿ ಪ್ರತಿಭಟನೆ

Webdunia
ಬುಧವಾರ, 19 ಜುಲೈ 2017 (13:11 IST)
ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಐಪಿಗಳಿಗೆ ಕಾನೂನುಬಾಹಿರವಾಗಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ವರದಿ ಸಲ್ಲಿಸಿ ವರ್ಗಾವಣೆಯಾಗಿದ್ದ ಡಿಐಜಿ ರೂಪಾ ಅವರ ವರ್ಗಾವಣೆ ರದ್ದುಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
 
ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ದಕ್ಷ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ, ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
 
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಹಲವಾರು ಹಿರಿಯ ಪ್ರಾಮಾಣಿಕ ಅಧಿಕಾರಿಗಳ ಶೋಷಣೆ ಮಾಡಲಾಗಿದೆ. ಭ್ರಷ್ಟರ ವಿರುದ್ಧ ಕ್ರಮಕೈಗೊಂಡ ಅಧಿಕಾರಿಗಳನ್ನೇ ಸರಕಾರ ಗುರಿಯಾಗಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
 
ಡಿಐಜಿ ರೂಪಾ ಅವರ ವರ್ಗಾವಣೆಯನ್ನು ಕೂಡಲೇ ರದ್ದುಗೊಳಿಸಬೇಕು. ಪರಪ್ಪನ ಅಗ್ರಹಾರ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲಿಗೆ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಆಭರಣ ಪ್ರಿಯರಿಗೆ ಬಿಗ್ ಅಪ್ಡೇಟ್: ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ

ಸಿಎಂ ಜೊಸೆಫ್ ವಿಜಯ್ ಗೆ ಕುರ್ಚಿ ಉಳಿಸಿಕೊಳ್ಳಲು ಅನ್ಯ ಧರ್ಮಗಳು ಬೇಕು, ಅದಕ್ಕೆ ಕಾರ್ತಿಕ ದೀಪ ಬೆಳಗಲು ಬಿಡಲಿಲ್ಲ: ಮನ್ನಾರ್ಗುಡಿ ಜೀಯರ್ ಸ್ವಾಮೀಜಿ Video

ಹೋಟೆಲ್ ರೂಂನಲ್ಲಿ ಯುವತಿಯನ್ನು ಕೂಡಿಹಾಕಿದ್ದ ಸಲ್ಮಾನ್, ತಪ್ಪಿಸಿಕೊಳ್ಳಲೆತ್ನಿಸಿದಾಗ ಕೊಲೆಗೆ ಯತ್ನ: ಶಾಕಿಂಗ್ ದೃಶ್ಯ ವೈರಲ್ Video

ಆಶಾ ಕಾರ್ಯಕರ್ತೆಯರನ್ನು ಭೇಟಿಯಾದ ಬಳಿಕ ರಮ್ಯಾ ಅಚ್ಚರಿಯ ಟ್ವೀಟ್

ಮುಂದಿನ ಸುದ್ದಿ
Show comments