ಎಫ್‌ಐಆರ್ ರದ್ದುಗೊಳಿಸಲು ಕೋರಿ ಪ್ರಸಾದ್, ಮೊಹಾಂತಿ ಹೈಕೋರ್ಟ್ ಮೊರೆ

Webdunia
ಮಂಗಳವಾರ, 19 ಜುಲೈ 2016 (12:26 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಧಿಕಾರಿಗಳಾದ ಎಂ.ಎಂ.ಪ್ರಸಾದ್ ಹಾಗೂ ಮೊಹಾಂತಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ.
 
ಐಎಎಸ್ ಅಧಿಕಾರಿಗಳಾದ ಎಂ.ಎಂ.ಪ್ರಸಾದ್ ಹಾಗೂ ಮೊಹಾಂತಿ ಅವರು ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ. ಯಾವುದೇ ಅನುಮತಿ ಪಡೆಯದೆ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತು ಖಾಸಗಿ ದೂರು ದಾಖಲಿಸಿದ್ದಾರೆ. ಸಮಕ್ಷ ಪ್ರಾಧೀಕಾರದ ಅನುಮತಿ ಪಡೆಯಬೇಕಿತ್ತು. ಪ್ರಕರಣ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಅದಲ್ಲದೆ ರಾಜ್ಯ ಸರಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿದೆ ಎಂದು ಉಲ್ಲೇಖಿಸಿದ್ದಾರೆ.
 
ಪ್ರಕರಣ ಕುರಿತಂತೆ ತನಿಖೆ ನಡೆಯುತ್ತಿರುವುದನ್ನು ಪರಿಗಣಿಸದೆ ಮಡಿಕೇರಿ ಹೆಚ್ಚುವರಿ ಕೆಜೆಎಂಎಫ್ ಕೋರ್ಟ್ ಎಫ್‌ಐಆರ್ ದಾಖಲಿಸುವಂತೆ ಸೂಚನೆ ನೀಡಿದೆ. ನಮ್ಮ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದು ಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
 
ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಿಸಿ ಎಂದು ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನ್ನಪೂರ್ಣೆಶ್ವರಿಯವರು ಮಡಿಕೇರಿ ಟೌನ್ ಪೊಲೀಸರಿಗೆ ಸೂಚನೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments