Select Your Language

Notifications

webdunia
webdunia
webdunia
webdunia

ರಾಜ್ಯಸಭೆ ಚುನಾವಣೆಯನ್ನು ರದ್ದುಗೊಳಿಸಿ: ಎಚ್.ಡಿ.ಕುಮಾರಸ್ವಾಮಿ

ರಾಜ್ಯಸಭೆ ಚುನಾವಣೆಯನ್ನು ರದ್ದುಗೊಳಿಸಿ: ಎಚ್.ಡಿ.ಕುಮಾರಸ್ವಾಮಿ
ಹುಬ್ಬಳ್ಳಿ , ಶುಕ್ರವಾರ, 3 ಜೂನ್ 2016 (15:49 IST)
ರಾಜ್ಯಸಭೆ ಚುನಾವಣೆಯನ್ನು ರದ್ದುಗೊಳಿಸಿ, ಚುನಾವಣೆಗೆ ಮತ ನೀಡಲು ಶಾಸಕರಿಂದ ಕೋಟಿ ಕೋಟಿ ಹಣದ ಬೇಡಿಕೆ ಪ್ರಕರಣದ ಕುರಿತು ತನಿಖೆ ನಡೆಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಚುನಾವಣೆಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಬಾರಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
 
ರಾಜ್ಯ ಜೆಡಿಎಸ್ ಪಕ್ಷವನ್ನು ನಿರ್ನಾಮಗೊಳಿಸಲು ಸ್ಟಿಂಗ್ ಆಪರೇಶನ್ ನಡೆಸಲಾಗಿದ್ದು, ಈ ಮೂಲಕ ಸಾರ್ವಜನಿಕರಿಗೆ ಪಕ್ಷದ ಕುರಿತು ಅವಿಶ್ವಾಸ ಮೂಡಿಸಲು ಮುಂದಾಗಿದ್ದಾರೆ. ನಮ್ಮ ಪಕ್ಷವನ್ನು ಗುರಿಯಾಗಿಸಿ ಸ್ಟಿಂಗ್ ಆಪರೇಶನ್ ನಡೆಸಿರುವುದು ಖಂಡನೀಯ ಎಂದು ಹೇಳಿದ್ದಾರೆ.
 
ರಾಜ್ಯಸಭೆ ಚುನಾವಣೆಗೆ 100 ಕೋಟಿ ಹೇಳಿಕೆ ವಿಚಾರವಾಗಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ವಿಧಾನಸಭೆ ಅಭ್ಯರ್ಥಿ ಫಾರೂಕ್ ಈ ರೀತಿ ಹೇಳಿಕೆ ನೀಡಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಈ ಘಟನೆ ಕುರಿತಂತೆ ಕನ್ನಡ ಮಕ್ಕಳ ಪಕ್ಷದ ಶಾಸಕ ಅಶೋಕ್ ಖೇಣಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯನವರದ್ದು ದುರಹಂಕಾರದ ಪರಮಾವಧಿ: ಪೂಜಾರಿ