ನಿಂತಿದ್ದ ಬೈಕ್​​, ಕಾರಿಗೆ ಕ್ಯಾಂಟರ್​ ಡಿಕ್ಕಿ, 2 ಸಾವು

Webdunia
ಶನಿವಾರ, 17 ಸೆಪ್ಟಂಬರ್ 2022 (19:08 IST)
ಚಿಕ್ಕಬಳ್ಳಾಪುರದ ರಾಮದೇವರ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಾಗೂ ನಾಲ್ವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿಂತಿದ್ದ ಬೈಕ್​, ಕಾರುಗಳಿಗೆ ಕ್ಯಾಂಟರ್ ಡಿಕ್ಕಿಹೊಡೆದು ರಾಮದೇವರಗುಡಿ ಪ್ರಣವ್ ಹೋಟೆಲ್​​​ಗೆ ನುಗ್ಗಿದೆ. ಹೆದ್ದಾರಿಯಿಂದ ಹೋಟೆಲ್​​​ಗೆ ಕ್ಯಾಂಟರ್ ನುಗ್ಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಹೋಟೆಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ ಬೈಕ್ ಸವಾರ ಜನಾರ್ಧನ ಮೃತಪಟ್ಟಿದ್ದಾರೆ. ಅಲ್ಲದೆ ಬಾಣಂತಿಗೆ ಗಂಭೀರ ಗಾಯಗಳಾಗಿದ್ದು, ಗರ್ಭಾವಸ್ಥೆಯಲ್ಲಿದ್ದ ಮಗು ಮೃತಪಟ್ಟಿದೆ. ಬಾಣಂತಿಯ ಮತ್ತೊಂದು ಮಗು ಬಚಾವ್ ಆಗಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಡ್ಡ ಬಂದ ಕಾರು ತಪ್ಪಿಸಲು ಹೋಗಿ ಕ್ಯಾಂಟರ್ ಹೋಟೆಲ್​​​ಗೆ ನುಗ್ಗಿದೆ. ಹೋಟೆಲ್ ಮುಂದೆ ನಿಂತಿದ್ದ ಐದು ಕಾರುಗಳು ಜಖಂ ಆಗಿವೆ. ಇನ್ನು ಸ್ಥಳಕ್ಕೆ ಚಿಕ್ಕಬಳ್ಳಾಪುರ SP D.L.ನಾಗೇಶ್​​​​​​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಟರ್​ನ್ನು ವಶಕ್ಕೆ ಪಡೆದು, ಚಾಲಕ ಅಜೀತ್​ನನ್ನು ಬಂಧಿಸಲಾಗಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡುತ್ತೇವೆ ಎಂದು SP ಡಿ.ಎಲ್.ನಾಗೇಶ್​​​ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಡಿಕೆ ಶಿವಕುಮಾರ್ ಮನೆ ಬ್ರೇಕ್ ಫಾಸ್ಟ್ ಮುಗಿಸಿ ಸಿದ್ದರಾಮಯ್ಯ ನೇರವಾಗಿ ಹೋಗಿದ್ದು ಇಲ್ಲಿಗೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಮುಂದಿನ ಸುದ್ದಿ
Show comments