Publish Date: Tue, 17 Jan 2023 (19:55 IST)
Updated Date: Tue, 17 Jan 2023 (19:58 IST)
ಬೈಕ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಅಂಜನಾ ನಗರ ಬಸ್ ನಿಲ್ದಾಣದ ಬಳಿ ನಡೆದಿದೆ. ರವಿ (22), ವಿಕಾಸ್ (20) ಮೃತ ಬೈಕ್ ಸವಾರರು. ನಿನ್ನೆ ರಾತ್ರಿ 8 ಗಂಟೆಗೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಂಜನಾನಗರ ಬಸ್ ನಿಲ್ದಾಣ ಬಳಿ ಪಲ್ಸರ್ ಬೈಕ್ನಲ್ಲಿ ಹೋಗುತ್ತಿದ್ದ ಯುವಕರು ಹಿಂಬದಿಯಿಂದ ಕ್ಯಾಂಟರ್ಗೆ ಗುದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಯುವಕರು ಕೆಳಗೆ ಬಿದ್ದಿದ್ದು ಯುವಕರ ಮೇಲೆ ಕ್ಯಾಂಟರ್ ಹರಿದಿದೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ತೀವ್ರ ರಕ್ತಸ್ರಾವವಾಗಿ ಯುವಕರು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.