Publish Date: Tue, 27 Dec 2022 (17:10 IST)
Updated Date: Tue, 27 Dec 2022 (17:13 IST)
ಅರಮನ ನಗರಿ ಮೈಸೂರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.. ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿದೆ. ಮೈಸೂರಿನ ನೆರಗ್ಯಾತನಹಳ್ಳಿ ಗ್ರಾಮದ ಬಳಿ ಅಪಘಾತ ನಡೆದಿದೆ. ಹುಳುಕನಹುಂಡಿ ಗ್ರಾಮದ ವಿನಯ್ (23) ಮೃತ ದುರ್ದೈವಿಯಾಗಿದ್ದಾನೆ. ಸ್ಥಳಕ್ಕೆ ನರಸೀಪುರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಿ.ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.