Publish Date: Sat, 25 Nov 2017 (13:17 IST)
Updated Date: Sat, 25 Nov 2017 (13:21 IST)
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾರಿನ ಟಯರ್ ಸಿಡಿದು ಇಬ್ಬರು ಮಕ್ಕಳು ಸೇರಿ ಐವರು ಸಾವಿಗೀಡಾಗಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಎರ್ಟಿಗಾ ಕಾರಿನ ಟಯರ್ ಸಿಡಿದು ಐದುಮಂದಿ ಸಾವಿಗೀಡಾಗಿದ್ದಾರೆ. ಹಿರಿಯೂರು ತಾಲೂಕು ಮೇಟಿಕುರ್ಕೆ ಗ್ರಾಮದ ಬಳಿ ಈ ಭೀಕರ ಘಟನೆ ಸಂಭವಿಸಿದೆ.
ಎರ್ಟಿಗಾ ಕಾರಿನ ಟಯರ್ ಸ್ಫೋಟಗೊಂಡು ಸ್ಕಾರ್ಪಿಯಾಗೆ ಡಿಕ್ಕಿ ಹೊಡೆದಿದೆ. ಮೃತರು ಚಿತ್ರದುರ್ಗ ಮತ್ತು ಬೆಂಗಳೂರು ಮೂಲದವರು. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.