ಚಿಕ್ಕಮಗಳೂರು: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಬಾಂಬ್ ಸ್ಫೋಟ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಗಡಿ ಭಾಗಗಳಲ್ಲಿ ಪೊಲೀಸ್ ಇಲಾಖೆ ಭದ್ರತೆ ಹೆಚ್ಚಿಸಿದೆ.
ಘಟನೆ ಬಳಿಕ ಜಿಲ್ಲೆಗೆ ಬರುವ ಹಾಗೂ ಜಿಲ್ಲೆಯಿಂದ ಹೊರಡುವ ಎಲ್ಲಾ ವಾಹನಗಳನ್ನೂ ತಪಾಸಣೆ ಮಾಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಚಾರ್ಮಾಡಿ ಘಾಟಿ ಹತ್ತಿ ಬರುವ ವಾಹನಗಳನ್ನು ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ಪೊಲೀಸರು ತಡೆದು ಪರಿಶೀಲನೆಗಳನ್ನು ನಡೆಸುತ್ತಿದ್ದಾರೆ. ದಲ್ಲದೆ ವಾಹನದಲ್ಲಿರುವವರ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಪ್ರಮುಖ ಪ್ರವಾಸಿ ತಾಣಗಳಿದ್ದು, ಜನಸಂದಣೆ ಸೇರುವ ಕಡೆ ಹೆಚ್ಚಿನ ಭದ್ರತೆ ಬಗ್ಗೆ ನಿಗಾ ವಹಿಸಲಾಗಿದೆ.