Publish Date: Sun, 08 Sep 2019 (20:16 IST)
Updated Date: Sun, 08 Sep 2019 (20:19 IST)
ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಕಾರ್ ಬೆಸ್ಕಾಂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಬೆಸ್ಕಾಂ ಕಂಬ ಮತ್ತು ವಾಹನ ಜಖಂಗೊಂಡಿದೆ.
ದಾವಣಗೆರೆ ನಿಜಲಿಂಗಪ್ಪ ಬಡಾವಣೆ 2 ನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ.
ಅಪ್ರಾಪ್ತ ವಯಸ್ಸಿನ ಹುಡುಗರು ವಾಹನ ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ಬಡಾವಣೆ ಮನೆಗಳ ವಿದ್ಯುತ್ ಸಂಪರ್ಕ ಕಟ್ ಆಗಿದೆ.
ಮಹೀಂದ್ರಾ ಎಸ್ ಯು ವಿ ಕಾರ್ ಅಪಘಾತವಾಗಿದೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.