ಬೈಕ್​ ಸವಾರನ ಮೇಲೆ ಕಾರು ಚಾಲಕ ಗುಂಡು ಹಾರಿಸಿದ ಪ್ರಕರಣ - ಆರೋಪಿ ಕಾರು ಮಾಲೀಕ ಪತ್ತೆ

Webdunia
ಶುಕ್ರವಾರ, 15 ಅಕ್ಟೋಬರ್ 2021 (21:53 IST)
ಬೆಂಗಳೂರು: ಬೈಕ್​ ಸವಾರನ ಮೇಲೆ ಕಾರು ಚಾಲಕ ಗುಂಡು ಹಾರಿಸಿದ ಪ್ರಕರಣ ಸಂಬಂಧ ಇದೀಗ ಆರೋಪಿ ಕಾರು ಮಾಲೀಕನನ್ನು ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.
 
ಯಶವಂತಪುರ ಠಾಣಾ ವ್ಯಾಪ್ತಿಯ ಎಂ.ಎಸ್.ರಾಮಯ್ಯ ಆಸ್ಪತ್ರೆ ಹಿಂಬದಿಯ ರಸ್ತೆಯಲ್ಲಿ ತನ್ನ ಐಷಾರಾಮಿ ಔಡಿ ಕಾರಿಗೆ ಬೈಕ್ ತಾಗಿಸಿದ್ದಾನೆ ಎಂದು ಕೋಪಗೊಂಡ ಕಾರು ಚಾಲಕ ಅನಿಲ್​ ಎಂಬ ಬೈಕ್ ಸವಾರನ ಮೇಲೆ ಎರಡು ಬಾರಿ ಗುಂಡು ಹಾರಿಸಿ ಇತ್ತೀಚೆಗೆ ಪರಾರಿಯಾಗಿದ್ದನು. ಅದೃಷ್ಟವಶಾತ್ ಅನಿಲ್ ಪ್ರಾಣಾಪಾಯದಿಂದ ಪಾರಾಗಿದ್ದನು.ಈ ಘಟನೆ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡಿದ್ದ ಯಶವಂತಪುರ ಪೊಲೀಸರು, ಇದೀಗ ಕಾರು ಚಾಲಕನನ್ನು ತಮ್ಮ ವಶಕ್ಕೆ ಪಡೆದುಕೊಂಡು ಆತನ ವಿರುದ್ಧ ಐಪಿಸಿ ಸೆಕ್ಷನ್ 307, 323, ಹಾಗೂ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ.ಆರೋಪಿಯನ್ನು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಖಾಸಗಿ ಹೋಟೆಲ್‌ನ ಮಾಲೀಕ ರವೀಶ್ ಗೌಡ ಎಂದು ಗುರುತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments