Select Your Language

Notifications

webdunia
webdunia
webdunia
webdunia

ಮಳೆಯಲ್ಲಿಯೂ ಧಗಧಗನೇ ಉರಿದ ಕಾರ್

hubali
hubali , ಮಂಗಳವಾರ, 6 ಜುಲೈ 2021 (13:51 IST)
ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಹೊರಟಿದ್ದ ಕಾರ್‌ವೊಂದರಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಧಗಧಗನೇ ಉರಿದ ಘಟನೆ ಇಂದು ಸಂಜೆ ನವನಗರ ಬಳಿ ಸಂಭವಿಸಿದೆ.
ಭಾರಿ ಪ್ರಮಾಣದಲ್ಲಿ ಸುರಿದ ಮಳೆಯೂ ಕೊಂಚ ಬಿಡುವು ನೀಡಿದ ಸಂದರ್ಭದಲ್ಲೇ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಹೊರಟಿದ್ದ ಕಾರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಧಗಧಗನೇ ಉರಿಯುತ್ತಿರುವುದನ್ನು ನೋಡಿದ ದಾರಿ ಹೋಕರು ತಮ್ಮ ಮೊಬೈಲ್‌ನಲ್ಲಿ ಇಡೀ ಘಟನಾವಳಿಯನ್ನು ಸೆರೆ ಹಿಡಿದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಚಾಲಕನ ಚಾಣಾಕ್ಷತನದಿಂದ ಕಾರ್‌ನಲ್ಲಿ ತೆರಳುತ್ತಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಕಸ್ಮಿಕ ಬೆಂಕಿ ದುರ್ಘಟನೆಯಲ್ಲಿ ಸುಟ್ಟು ಕರಕಲಾದ ಕಾರ್ ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾಲಿಂಗಪೂರ ಪುರಸಭೆ ಪ್ರಕರಣ: ಸಿಐಡಿಯಿಂದ ಪ್ರತ್ಯೇಕ ವಿಚಾರಣೆ