Publish Date: Tue, 09 Oct 2018 (13:56 IST)
Updated Date: Tue, 09 Oct 2018 (13:58 IST)
ಇಂಡಿಕಾ ಕಾರಿನಲ್ಲಿ ಆಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಸಮೀಪದ ಸಿದ್ಧಾರ್ಥ ನಗರದ ಬಳಿ ಇಂಡಿಕಾ ಕಾರಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಹೊಸಕೋಟೆಯ ಡಿವೈಎಸ್ಪಿ ಕೆ.ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ತಮಿಳುನಾಡಿನ ಮೂಲದ ಮುರುಗೇಶ್ (37), ಎಸ್.ರಾಮ್ ಕುಮಾರ್(20) ಎಂಬ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಂದು ಇಂಡಿಕಾ ಕಾರು 230 ಕೆಜಿ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.
ಇವರು ಆಂಧ್ರದ ರಾಜಮಂಡ್ರಿಯಿಂದ ಹೊಸಕೋಟೆ ಮುಖಾಂತರ ತಮಿಳುನಾಡಿಗೆ ಗಾಂಜಾ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.