ಮಂಡ್ಯ: ಮದ್ದೂರು ಪಟ್ಟಣದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.
ಇನ್ ಸ್ಪೆಕ್ಟರ್ ಮಂಜುನಾಥ ಅವರು, ಅನ್ಯಕೋಮಿನ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಮತ್ತು ನೋವು ಉಂಟಾಗುವಂತೆ ಮಾತನಾಡಿದ್ದಾರೆ ಎಂದು ದೂರನ್ನು ನೀಡಿದ್ದಾರೆ.
ಈ ಸಂಬಂಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ಮದ್ದೂರಿನಲ್ಲಿ ನಡೆದ ಗಲಭೆ ಸಂಬಂಧ ಪ್ರಚೋದನಕಾರಿ ಹೇಳಿಕೆಯಡಿಯಲ್ಲಿ ಬಿಜೆಪಿ ನಾಯಕ ಸಿಟಿ ರವಿ ವಿರುದ್ದನೂ ಪ್ರಕರಣ ದಾಖಲಾಗಿದೆ. ಅದರ ಬೆನ್ನಲ್ಲೇ ಇದೀಗ ಯತ್ನಾಳ್ ವಿರುದ್ದವೂ ಪ್ರಕರಣ ದಾಖಲಾಗಿದೆ.