Select Your Language

Notifications

webdunia
webdunia
webdunia
webdunia

ಪ್ರಜ್ವಲ್‌ ರೇವಣ್ಣ ವಿರುದ್ಧದ ಪ್ರಕರಣ: ಭವಾನಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

Bhavani Revanna

Sampriya

ನವದೆಹಲಿ , ಬುಧವಾರ, 10 ಜುಲೈ 2024 (14:40 IST)
ನವದೆಹಲಿ: ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಿಯಾಗಿರುವ ಭವಾನಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಪ್ರಜ್ವಲ್‌ ಅವರ ತಾಯಿಯಾಗಿರುವ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ, ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ಮೇಲೆ ಭವಾನಿ ರೇವಣ್ಣ ಅವರಿಗೆ ನೋಟಿಸ್ ನೀಡಿದೆ.

ವಿಚಾರಣೆಯನ್ನು ನ್ಯಾಯಾಪೀಠ ಮುಂದಿನ ವಾರಕ್ಕೆ ಮುಂದೂಡಿತು. ಎಸ್‌ಐಟಿ ಪರವಾಗಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ವಿಚ್ಚೇದನಗೊಂಡ ಮುಸ್ಲಿಂ ಮಹಿಳೆಯೂ ಪತಿಯಿಂದ ಜೀವನಾಂಶಕ್ಕೆ ಅರ್ಹಳು: ಸುಪ್ರೀಂ ಕೋರ್ಟ್