Publish Date: Thu, 20 Jul 2017 (13:56 IST)
Updated Date: Thu, 20 Jul 2017 (13:59 IST)
ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ದೂರು ದಾಖಲಿಸಿದ್ದಾರೆ.
ಇಂದಿರಾ ಕ್ಯಾಂಟಿನ್ ಯೋಜನೆಯಲ್ಲಿ ಅವ್ಯವಹಾರವಾಗಿದೆ. ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ಎಂದು ಭ್ರಷ್ಟಾಚಾರ ನಿಗ್ರಹ ದಳ, ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಇಂದಿರಾ ಕ್ಯಾಂಟಿನ್ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿಗಳ ಅವ್ಯವಹಾರವಾಗಿರುವುದು ಕಂಡು ಬಂದಿದೆ. ಅವ್ಯವಹಾರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಅವರ ಬೆಂಬಲವಿದೆ ಎಂದು ಬಿಜೆಪಿ ಮುಖಂಡ ರಮೇಶ್ ದೂರಿನಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.