Select Your Language

Notifications

webdunia
webdunia
webdunia
webdunia

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲು: ಇಲ್ಲಿದೆ ಡೀಟೈಲ್ಸ್

HD Kumaraswamy
ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ನೀಡಿದ ದೂರಿನ ಅನ್ವಯ ದೂರು ದಾಖಲಾಗಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಬಿಎನ್ಎನ್ಎಸ್ ಅಂಡರ್ ಸೆಕ್ಷನ್ 224 ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಕುಮಾರಸ್ವಾಮಿ ಎ1 ಆರೋಪಿಯಾಗಿದ್ದರೆ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಎ2 ಆರೋಪಿಯನ್ನಾಗಿ ಮಾಡಲಾಗಿದೆ. ಜೆಡಿಎಸ್ ಮುಖಂಡ ಸುರೇಶ್ ಬಾಬು ಎ3 ಆರೋಪಿಯಾಗಿದ್ದಾರೆ.

ಈ ಹಿಂದೆ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಭ್ರಷ್ಟಾಚಾರ ಆರೋಪ ಮಾಡಿದ್ದರು. ಕುಮಾರಸ್ವಾಮಿ ವಿರುದ್ಧ ಚಂದ್ರಶೇಖರ್ ಆಕ್ಷೇಪಾರ್ಹ ಪದ ಬಳಸಿದ್ದರು ಎಂಬುದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದಾದ ಬೆನ್ನಲ್ಲೇ ಕುಮಾರಸ್ವಾಮಿ ಸಾರ್ವನಿಕವಾಗಿ ಎಡಿಜಿಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಆರೋಪಿಗಳು ದುರುದ್ದೇಶಪೂರಿತವಾಗಿ ಆರೋಪ ಮಾಡಿದ್ದಾರೆ ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರಿನಲ್ಲಿ ವಿವರಿಸಿದ್ದಾರೆ. ಈ ಹಿನ್ನಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಅಮೆರಿಕಾಗೆ ಹೊಸ ಅಧ್ಯಕ್ಷ ಯಾರು ನಾಳೆ ಬಹಿರಂಗ: ಟ್ರಂಪ್, ಕಮಲಾ ಹ್ಯಾರಿಸ್ ಭವಿಷ್ಯ ನಿರ್ಧಾರವಾಗುವುದು ಹೀಗೆ