Publish Date: Tue, 15 Nov 2016 (12:50 IST)
Updated Date: Tue, 15 Nov 2016 (12:53 IST)
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ ಅವರು ಆದಾಯ ತೆರಿಗೆ ಇಲಾಖೆಯಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
ಪುತ್ರಿಯ ಅದ್ದೂರಿ ವಿವಾಹ ಸಮಾರಂಭಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರ ಬಳಿ ದುಡ್ಡು ಎಲ್ಲಿಂದ ಬಂತು? ವಿವಾಹ ನಡೆಯುವ ಸ್ಥಳಕ್ಕೆ ಆದಾಯ ತೆರೆಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ ಒತ್ತಾಯಿಸಿದ್ದಾರೆ.
ಗಣಿಧಣಿ ಎಂದೇ ಖ್ಯಾತರಾದ ಜನಾರ್ಧನ ರೆಡ್ಡಿ ಅವರ ಏಕೈಕ ಪುತ್ರಿ ಬ್ರಹ್ಮಿಣಿ ವಿವಾಹ ನವೆಂಬರ್ 16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಈ ಅದ್ದೂರಿ ವಿವಾಹಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರ ಬಳಿ ದುಡ್ಡು ಎಲ್ಲಿಂದ ಹರಿದು ಬರುತ್ತಿದೆ ಎಂದು ನರಸಿಂಹಮೂರ್ತಿ ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ