Publish Date: Fri, 11 Nov 2016 (14:06 IST)
Updated Date: Fri, 11 Nov 2016 (14:11 IST)
ಟಿಪ್ಪು ಜಯಂತಿ ದಿನಾಚರಣೆಯಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ಅರೆನಗ್ನ ಚಿತ್ರಗಳ ವೀಕ್ಷಣೆ ಮಾಡಿದ್ದಾರೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಕರವೇ ಶಿವರಾಮೇಗೌಡ ಬಣದ ಸದಸ್ಯರು ಸಚಿವ ತನ್ವೀರ್ ವಿರುದ್ಧ ದೂರು ದಾಖಲಿಸಿದ್ದಾರೆ. ಸಚಿವನನ್ನು ಕೂಡಲೇ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ತನ್ವೀರ್ ಸೇಠ್, ಟಿಪ್ಪು ಜಯಂತಿ ಆಚರಣೆ ವೇಳೆ ಅರೆನಗ್ನ ಚಿತ್ರಗಳ ವೀಕ್ಷಣೆಯಲ್ಲಿ ತೊಡಗಿರುವುದು ಟಿವಿ ಮಾಧ್ಯಮಗಳಲ್ಲಿ ಸೆರೆಯಾಗಿತ್ತು.
ಅರೆನಗ್ನ ವೀಕ್ಷಣೆಯನ್ನು ಸಮರ್ಥಿಸಿಕೊಂಡಿದ್ದ ಸಚಿವ ತನ್ವೀರ್ ಸೇಠ್, ಮೂರು ಮೂರು ತಿಂಗಳುಗಳವರೆಗೆ ಮನೆಗೆ ಹೋಗೋಕಾಗಲ್ಲ ಏನು ಮಾಡೋದು ಎನ್ನುವ ನೀಡಿದ ಹಾರಿಕೆ ಉತ್ತರ ಜನರಲ್ಲಿ ಆಕ್ರೋಶ ಮೂಡಿಸಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ