ವಿಶೇಷ ವಿಮಾನದ ಪೈಲಟ್‌ರೊಬ್ಬರು ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿ ತಂಗಿದ್ದಾಗ 26 ವರ್ಷದ ಕ್ಯಾಬಿನ್ ಸಿಬ್ಬಂದಿಯ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಸಂತ್ರಸ್ತೆ ದೂರನ್ನು ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ನವೆಂಬರ್ 18 ರಂದು ಚಾರ್ಟರ್ಡ್ ಫ್ಲೈಟ್ ನಂತರ ಲೇಓವರ್ ಸಮಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ನವೆಂಬರ್ 18 ರಂದು ಐಷಾರಾಮಿ ಹೋಟೆಲ್‌ನಲ್ಲಿ 26 ವರ್ಷದ ಕ್ಯಾಬಿನ್ ಸಿಬ್ಬಂದಿಯ ಮೇಲೆ 60 ವರ್ಷದ ಪೈಲಟ್ ರೋಹಿತ್ ಸರನ್ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪವನ್ನು ಬೆಂಗಳೂರಿನ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಬೇಗಂಪೇಟೆ ಮತ್ತು ಪುಟ್ಟಪರ್ತಿಯಿಂದ ವಿಮಾನದ ನಂತರ ಈ ಘಟನೆ ಸಂಭವಿಸಿದ್ದು, ಪ್ರಕರಣವನ್ನು ಹಲಸೂರು ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.