Select Your Language

Notifications

webdunia
webdunia
webdunia
webdunia

ಮಾಸ್ಕ್ ಧರಿಸದೆ ಹೊರಗೆ ಬಂದರೆ ಬೀಳುತ್ತೆ ಕೇಸ್

ಮಾಸ್ಕ್ ಧರಿಸದೆ ಹೊರಗೆ ಬಂದರೆ ಬೀಳುತ್ತೆ ಕೇಸ್
ಹಾಸನ , ಬುಧವಾರ, 15 ಏಪ್ರಿಲ್ 2020 (20:15 IST)
ಸಾರ್ವಜನಿಕರು ಮಾಸ್ಕ್ ಧರಿಸದೆ ಹೊರಗಡೆ ಬಂದರೆ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಸಾರ್ವಜನಿಕರು ಮಾಸ್ಕ್ ಧರಿಸದೆ ಹೊರಗಡೆ ಬಂದರೆ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಎಚ್ಚರಿಸಿದ್ದಾರೆ.

ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಮಾತನಾಡಿ, ಹಾಸನ ಜಿಲ್ಲೆಯ ಜನತೆ ಏ.20 ರವರೆಗೆ ಕಟ್ಟುನಿಟ್ಟಾಗಿ ಲಾಕ್ ಡೌನ್ ನಿಯಮಗಳನ್ನು ಪಾಲಿಸಬೇಕು. ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮಾಸ್ಕ್ ಅಥವಾ ಕರವಸ್ತ್ರ, ಟವೆಲ್, ದುಪ್ಪಟ್ಟಗಳಿಂದ ಮೂಗು ಮತ್ತು ಬಾಯಿ ಮುಚ್ಚಿಕೊಂಡು ಅಗತ್ಯವಿದ್ದಾಗ ರಸ್ತೆಗೆ ಬರಬೇಕು ಎಂದು ಹೇಳಿದರು.

ಲಾಕ್ ಡೌನ್ ಸಂದರ್ಭದಲ್ಲಿ ಕಾಮಗಾರಿ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಕಾರ್ಯಗಳನ್ನು ನಡೆಸಲು ಅವಕಾಶವಿದೆ. ಆದರೆ ಮೈಮರೆತು ನಿಯಮ ಉಲ್ಲಂಘಿಸಿದರೆ ವ್ಯತಿರಿಕ್ತ ಪರಿಣಾಮಗಳಾಗುತ್ತವೆ. ಸಾಮಾಜಿಕ ಅನಾರೋಗ್ಯ ತಲೆದೋರುತ್ತದೆ ಹಾಗಾಗಿ ಎಚ್ಚರಿಕೆಯಿಂದಿರಬೇಕಿದೆ ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ : ಬೆಚ್ಚಿ ಬಿದ್ದ ರೈತರು