Select Your Language

Notifications

webdunia
webdunia
webdunia
webdunia

ದನದ ಓಣಿಯನ್ನೂ ಬಿಡದ ರಾಜಕೀಯ

ಪ್ರತಿಭಟನೆ
ದನದ ಓಣಿ ಮೇಲೆ ಕೇಸ್ ದಾಖಲಾಗಿರೋದಕ್ಕೆ ಆಕ್ರೋಶ ವ್ಯಕ್ತವಾಗತೊಡಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ದನದ ಓಣಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು. ಆದರೆ ಪ್ರತಿಭಟನೆ ನಡೆಸಿದವರ ಮೇಲೆ 107 ರ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ. ಕೇಸ್ ನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹ ಕೇಳಿಬಂದಿದೆ. ಈ ಕುರಿತು ಬಿಜೆಪಿ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಗೋಕಾಕ್ ಫಾಲ್ಸ್ ಗೆ ಹೊಂದಿಕೊಂಡಿರುವ ದನದ ಓಣಿಯ ನಿವಾಸಿಗಳು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ್ರು. ಸುಮಾರು 500 ಕುಟುಂಬಗಳು ವಾಸವಾಗಿರುವ ಈ ಪ್ರದೇಶಕ್ಕೆ ವಿದ್ಯುತ್ ಕಲ್ಪಿಸುವಂತೆ ಒತ್ತಾಯಿಸಿದ್ರು ಈಚೆಗೆ ಪ್ರತಿಭಟನೆ ನಡೆಸಲಾಗಿತ್ತು.

ಆದರೆ ರಾಜಕೀಯ ಪ್ರೇರಿತ ಗುಂಪೊಂದು ಪ್ರತಿಭಟನಾಕಾರರರೊಂದಿಗೆ ಗಲಾಟೆ ಮಾಡಿ ಪ್ರತಿಭಟನೆ ಹತ್ತಿಕ್ಕಲು ಪ್ರಯತ್ನಿಸಿದ್ದರು. ಓಣಿ ನಿವಾಸಿಗಳ ಮೇಲೆ 107 ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಕೇಸ್ ಕೈಬಿಡುವಂತೆ ಒತ್ತಾಯ ಮಾಡಿದ್ದಾರೆ.



 


Share this Story:

Follow Webdunia kannada

ಮುಂದಿನ ಸುದ್ದಿ

ತೆರಿಗೆ ಸಲಹೆಗಾರರ ದಿನ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಪ್ರವಾಸ